ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ 100 ಕೋಟಿ ಕಾಯ್ದಿರಿಸಲು ಮನವಿ

Update: 2020-08-10 12:46 GMT

ಬಳ್ಳಾರಿ, ಆ.10: ಬಳ್ಳಾರಿ ನಗರದಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ನಿಧಿ ಅಡಿ 100 ಕೋಟಿ ಕಾಯ್ದಿರಿಸಲು ಬಳ್ಳಾರಿ ಶಾಸಕ ಜಿ.ಸೋಮಶೇಖರ್ ರೆಡ್ಡಿ ಅವರು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಸಿ. ಪಾಟೀಲ್ ರೆವೂರ್ ಅವರಿಗೆ ಮನವಿ ಮಾಡಿದ್ದಾರೆ.

ಬಳ್ಳಾರಿ ಜಿಲ್ಲೆಯು ಕೈಗಾರಿಕೆ, ವಾಣಿಜ್ಯ ಮತ್ತು ವ್ಯವಹಾರಗಳಲ್ಲಿ ಅತ್ಯಂತ ಕ್ಷಿಪ್ರಗತಿಯಲ್ಲಿ ಬೆಳೆಯುತ್ತಿದೆ. ಈ ಹಿಂದೆ ನಗರದಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ಸಂಗನಕಲ್ಲು, ಸಿರಿವಾರ ಮತ್ತು ಚಾಗನೂರು ಗ್ರಾಮಗಳಲ್ಲಿ ಸುಮಾರು 600 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಜತೆಗೆ ಸರಕಾರವು ರೈತರಿಗೆ ಕಾನೂನು ರೀತಿಯಲ್ಲಿ ಭೂ ಪರಿಹಾರವನ್ನೂ ಸಹ ನೀಡಿದೆ. ಈ ಭೂಪ್ರದೇಶವನ್ನು ಬೇರೆ ಯಾವುದೇ ಉದ್ದೇಶಕ್ಕೆ ಬಳಸಬಾರದು. ಸರಕಾರದ ನಿಯಮದಂತೆ ಈ ಯೋಜನೆಯನ್ನು ಪುನರ್ ಸಮೀಕ್ಷೆ ಮಾಡಲಾಗಿದೆ. ಹೈದರಾಬಾದ್, ಬೆಂಗಳೂರು ಮತ್ತು ಇತರೆ ಮಹಾನಗರಗಳಲ್ಲಿರುವ ವಿಮಾನ ನಿಲ್ದಾಣಗಳಿಗೆ ಅನುಕೂಲವಾಗುವಂತೆ ಬಳ್ಳಾರಿಯಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಿಸಬೇಕು.

ಈ ಹಿನ್ನೆಲೆ 100 ಕೋಟಿ ಕಾಯ್ದಿರಿಸಬೇಕು ಎಂದು ಸೋಮಶೇಖರ್ ರೆಡ್ಡಿ ಕಲಬುರ್ಗಿಗೆ ತೆರಳಿ ರೆವೂರ್ ಪಾಟೀಲ್ ಅವರಿಗೆ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಕೆಕೆಆರ್‍ಡಿಬಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News