ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಿಮ್ಸ್ ವೈದ್ಯಕೀಯ ಸಿಬ್ಬಂದಿಯಿಂದ ಧರಣಿ

Update: 2020-08-10 12:47 GMT

ಹುಬ್ಬಳ್ಳಿ, ಆ.10: ವೇತನದಲ್ಲಿ ಶೇ.50ರಷ್ಟು ಹೆಚ್ಚಳ ಮಾಡುವುದು ಸೇರಿ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹುಬ್ಬಳ್ಳಿಯಲ್ಲಿ ಕಿಮ್ಸ್ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಗಳು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

ಕೊರೋನ ಸಂದರ್ಭದಲ್ಲಿ ಯಾವುದೇ ತೊಂದರೆಯಾಗದಂತೆ ನಾವು ಕಾರ್ಯ ನಿರ್ವಹಿಸುತ್ತಿದ್ದೇವೆ. ಹೀಗಾಗಿ, ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಗೆ ನೀಡುತ್ತಿರುವ ಪಿಂಚಣಿ ಸೌಲಭ್ಯ, ಎನ್‍ಪಿಎಸ್, ಜ್ಯೋತಿ ಸಂಜೀವಿನಿ ಸೇರಿ ಇತರೆ ಯೋಜನೆಗಳ ಸೌಲಭ್ಯವನ್ನು ನಮಗೂ ಒದಗಿಸಬೇಕೆಂದು ಒತ್ತಾಯಿಸಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. 

ಶ್ರಮವಹಿಸಿ ಕಾರ್ಯ ನಿರ್ವಹಿಸುತ್ತಿದ್ದರೂ ನಮಗೆ ಇಲ್ಲಿಯವರೆಗೂ ವೇತನವನ್ನು ಹೆಚ್ಚಳ ಮಾಡಿಲ್ಲ. ಇನ್ನು ಮುಂದೆಯಾದರೂ ಮೂಲ ವೇತನದಲ್ಲಿ ಶೇ.50ರಷ್ಟು ಹೆಚ್ಚಳ ಮಾಡುವಂತೆ ಸ್ಟಾಫ್ ನರ್ಸಿಂಗ್ ಸಿಬ್ಬಂದಿ ಒತ್ತಾಯಿಸಿದರು. ಈ ಬೇಡಿಕೆ ಈಡೇರಿಸುವವರೆಗೂ ಕಪ್ಪು ಪಟ್ಟಿ ಧರಿಸಿಯೇ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News