ಬೈಕ್ ವ್ಹೀಲಿಂಗ್ ಆರೋಪ: ಯುವಕರ ಬಂಧನ

Update: 2020-08-10 15:12 GMT

ಬೆಂಗಳೂರು, ಆ.10: ಇಲ್ಲಿನ ನೈಸ್ ರಸ್ತೆಯಲ್ಲಿ ಅಪಾಯಕಾರಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಆರೋಪದಡಿ ಹಲವು ಯುವಕರನ್ನು ಬ್ಯಾಟರಾಯನಪುರ ಸಂಚಾರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ನಗರದ ನಿವಾಸಿಗಳಾದ ಚಂದನ್, ಸುಮಂತ್, ಲಿಖಿತ್, ಹಾಗೂ ವಿನಯ್ ಎಂಬವರು ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳಿಂದ ವ್ಹೀಲಿಂಗ್ ಮಾಡಲು ಬಳಸುತ್ತಿದ್ದ 3 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರ ವಿರುದ್ಧ 3 ಪ್ರತ್ಯೇಕ ಎಫ್‍ಐಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News