​ಬ್ರಹ್ಮಾವರದಲ್ಲಿ ಅಂಡರ್‌ಪಾಸ್ ನಿರ್ಮಾಣಕ್ಕೆ ಹೊಸ ಪ್ರಸ್ತಾವ: ಶೋಭಾ

Update: 2020-08-10 16:42 GMT

ಉಡುಪಿ, ಆ.10: ಬ್ರಹ್ಮಾವರ ಬಸ್ ನಿಲ್ದಾಣದ ಬಳಿ ಈಗ ಇರುವ ಅಂಡರ್‌ಪಾಸ್‌ನ್ನು ವೈಜ್ಞಾನಿಕವಾಗಿ ಅಂಡರ್‌ಪಾಸ್ ಆಗಿ ಮಾಡಲು ಹೊಸ ಪ್ರಸ್ತಾವನೆ ಕಳುಹಿಸ ಲಾಗುವುದು. ಕಟಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಓವರ್ ಬ್ರಿಜ್ಡ್ ನಿರ್ಮಾಣಕ್ಕೆ ಪ್ರಸ್ತಾವನೆ ಈಗಾಗಲೇ ಕಳುಹಿಸಲಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಅವರು ಸುದ್ದಿ ಗೋಷ್ಠಿಯಲ್ಲಿ ಮಾತನಾಡುತಿದ್ದರು.

ಕಳೆದ ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರಿ ಹಾಗೂ ಕುಂದಾಪುರ ಪ್ಲೈಓವರ್ ಕಾಮಗಾರಿಯನ್ನು ಎಪ್ರಿಲ್ ತಿಂಗಳ ಒಳಗಾಗಿ ಪೂರ್ಣಗೊಳಿಸು ವಂತೆ ಸೂಚಿಸಲಾಗಿತ್ತು. ಆದರೆ ಕೋವಿಡ್‌ನಿಂದಾಗಿ ಕಾರ್ಮಿಕರು ಸ್ವಗ್ರಾಮ ಗಳಿಗೆ ತೆರೆಳಿದ ಕಾರಣ ಕಾಮಗಾರಿ ಬಾಕಿ ಉಳಿದಿದೆ. ಇದೀಗ ಮುಂದಿನ ಡಿಸೆಂಬರ್ ಒಳಗಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಲಾಗಿದೆ ಎಂದರು.

ರಾಷ್ಟ್ರೀಯ ಹೆದ್ದಾರಿ 169ಎ ಹಿರಿಯಡ್ಕ ಮತ್ತು ಓಂತಿಬೆಟ್ಟುವಿನಲ್ಲಿ ಬೈಪಾಸ್ ಬದಲು ಇರುವ ರಸ್ತೆಯನ್ನೇ ಅಗಲೀಕರಣ ಮಾಡಲಾಗುವುದು. ಇಲ್ಲಿ ಯಾವುದೇ ಧಾರ್ಮಿಕ ಸ್ಥಳಗಳಿಗೆ ತೊಂದರೆಯಾಗದ ರೀತಿಯಲ್ಲಿ ಕಾಮಗಾರಿ ನಡೆಸಲಾಗುವುದು. ಕರಾವಳಿ ಬೈಪಾಸ್ ಹಾಗೂ ಪರ್ಕಳದಲ್ಲ್ಲಿ ಮಳೆಯಿಂದಾಗಿ ಪದೇ ಪದೇ ಗುಂಡಿಗಳು ಬೀಳುತ್ತಿರುವುದರಿಂದ ಇದರ ದುರಸ್ತಿಗೆ ಸ್ಥಳದಲ್ಲಿಯೇ ಪ್ರತ್ಯೇಕ ಯಂತ್ರವನ್ನು ಇರಿಸುವಂತೆ ಸೂಚಿಸಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಜಿ್ಲಾಧಿಕಾರಿ ಜಿ.ಜಗದೀಶ್ ಉಪಸ್ಥಿತರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News