ಆ.11ರಿಂದ ರಾಜ್ಯಾದ್ಯಂತ ಮಳೆ ಪ್ರಮಾಣ ತಗ್ಗುವ ಸಾಧ್ಯತೆ: ಹವಾಮಾನ ಇಲಾಖೆ

Update: 2020-08-10 16:57 GMT

ಬೆಂಗಳೂರು, ಆ.10: ರಾಜ್ಯಾದ್ಯಂತ ಆ.11ರಿಂದ ಮಳೆಯ ಪ್ರಮಾಣ ಒಟ್ಟಾರೆ ತಗ್ಗಬಹುದು ಎಂದು ಹವಾಮಾನ ಇಲಾಖೆಯ ತಜ್ಞ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.

ಕರಾವಳಿ ಭಾಗದಲ್ಲಿ ಗಾಳಿಯ ವೇಗ ಹೆಚ್ಚಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದ್ದು, ಆ.11ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಆ. 11ರಂದು ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ. ಆದರೆ ಆ.12,13,14 ರಂದು ಕೆಲವು ಕಡೆ ಮಾತ್ರ ಮಳೆ ಬೀಳಲಿದೆ. ಮಲೆನಾಡಿನ ಜಿಲ್ಲೆಗಳಲ್ಲಿ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನದಲ್ಲಿ ಆ.11ರಂದು ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕುಂದಾಪುರದಲ್ಲಿ 19 ಸೆಂ.ಮೀ, ಕೊಲ್ಲೂರು 18, ಶಿರಾ 17 ಹೊನ್ನಾವರ 15, ಸಿದ್ಧಾಪುರ-ಆಗುಂಬೆಯಲ್ಲಿ 14, ಕಲಬುರಗಿ 2 ಸೆಂ.ಮೀಟರ್ ಮಳೆಯಾಗಿದೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News