ಕ್ವಾರಂಟೈನ್ ವಾಚ್ : ರಾಜ್ಯಕ್ಕೆ ದ.ಕ. ಜಿಲ್ಲೆ ಪ್ರಥಮ ಸ್ಥಾನ

Update: 2020-08-10 18:11 GMT

ಮಂಗಳೂರು, ಆ.10: ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಮೇಲೆ ಸತತವಾಗಿ ನಿಗಾ ವಹಿಸುತ್ತಿದ್ದು, ಇದನ್ನು ರಾಜ್ಯ ಕೋವಿಡ್ ವಾರ್ ರೂಂನಿಂದ ಅಭಿವೃದ್ಧಿಪಡಿಸಲಾದ ಕ್ವಾರಂಟೈನ್ ವಾಚ್ ಮೊಬೈಲ್ ತಂತ್ರಾಂಶದ ಮೂಲಕ ನಿರ್ವಹಿಸಲಾಗುತ್ತಿದೆ. ಕ್ವಾರಂಟೈನ್ ವಾಚ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಸತತವಾಗಿ ಉತ್ತಮ ಪ್ರಗತಿ ಸಾಧಿಸುವ ಜೊತೆಗೆ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಅಲ್ಲದೆ, ಕ್ವಾರಂಟೈನ್ ನಿಯಮವನ್ನು ಉಲ್ಲಂಘಿಸುವವರ ವಿರುದ್ಧ ಜಿಲ್ಲೆಯಲ್ಲಿ ಕಠಿಣ ಕ್ರಮ ಜರುಗಿಸಲಾಗುತ್ತಿದೆ. ಈಗಾಗಲೇ ನಿಯಮ ಉಲ್ಲಂಘಿಸಿದ 164 ಸಂಪರ್ಕಿತರ ಮೇಲೆ ಎಫ್‌ಐಆರ್ ಜರುಗಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಕಟ್ಟುನಿಟ್ಟಿನ ನಿಗಾ ವಹಿಸುವ ಜೊತೆಗೆ ನಿಯಮ ಉಲ್ಲಂಘಿಸಿದ ಸಂಪರ್ಕಿತರ ವಿರುದ್ಧ ಎಫ್‌ಐಆರ್ ದಾಖಲು ಮಾಡಿ ಅವರನ್ನು ಕಡ್ಡಾಯ ಸಾಂಘಿಕ ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಕಚೇರಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News