ಬಿಎಸ್​ಎನ್​​ಎಲ್ ಸಂಸ್ಥೆಯಲ್ಲಿ ದೇಶದ್ರೋಹಿಗಳೇ ತುಂಬಿಕೊಂಡಿದ್ದಾರೆ: ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ

Update: 2020-08-11 13:08 GMT

ಕಾರವಾರ, ಆ.11: ಬಿಎಸ್​ಎನ್​​ಎಲ್ ಸಂಸ್ಥೆಯಲ್ಲಿ ದೇಶದ್ರೋಹಿಗಳೇ ತುಂಬಿಕೊಂಡಿದ್ದಾರೆ ಎಂದು ಸಂಸದ ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕುಮಟಾದಲ್ಲಿ ಮಾತನಾಡಿದ ಅವರು, ಬಿಎಸ್​ಎನ್​​ಎಲ್ ನೆಟ್ವರ್ಕ್ ಬೆಂಗಳೂರಿನಲ್ಲಿ ಸಿಗುವುದೇ ಇಲ್ಲ. ದಿಲ್ಲಿಯಲ್ಲೂ ಸಿಗುತ್ತಿಲ್ಲ. ಇಡೀ ಬಿಎಸ್‌ಎನ್‌ಎಲ್ ಸಂಸ್ಥೆ ಇವತ್ತು ದೇಶಕ್ಕೊಂದು ಕಳಂಕ ಆಗಿದೆ ಎಂದು ಅವರು ಹೇಳಿದ್ದಾರೆ.

ಸಂಸ್ಥೆಗೆ ಸರ್ಕಾರ ಹಣ ಕೊಟ್ಟಿದೆ. ಮೂಲಸೌಕರ್ಯ ಇದೆ. ಎಲ್ಲವೂ ಇದೆ. ಆದರೆ ಕೆಲಸ ಮಾಡುವುದಿಲ್ಲ. ನಮ್ಮ ಸರಕಾರಕ್ಕೂ ಬಿಎಸ್​ಎನ್​​ಎಲ್ ಅನ್ನು ಸರಿ ಮಾಡ್ಲಿಕ್ಕೆ ಆಗಲಿಲ್ಲ. ಸಮರ್ಪಕ ಸೇವೆ ನೀಡಲು ಬಿಎಸ್​ಎನ್​​ಎಲ್ಲ್ ಸಂಸ್ಥೆಯ ನೌಕರರಿಂದ ಸಾಧ್ಯವಾಗುವುದಿಲ್ಲ. ಅದನ್ನು ನಾವು ಮುಗಿಸುತ್ತಿದ್ದೇವೆ. ಮುಂಬರುವ ದಿನಗಳಲ್ಲಿ ಆ ಸ್ಥಾನವನ್ನು ಖಾಸಗಿ ಸಂಸ್ಥೆಗಳು ತುಂಬಲಿವೆ. 85 ಸಾವಿರ ಸಿಬ್ಬಂದಿಯನ್ನು ಕೆಲಸದಿಂದ ತೆಗೆಯುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ನೌಕರರನ್ನು ಮನೆಗೆ ಕಳುಹಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News