ಕೋಟ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ

Update: 2020-08-11 17:10 GMT

ಬ್ರಹ್ಮಾವರ, ಆ.11: ಕೋಟ ಪೊಲೀಸ್ ಠಾಣೆಯ ನೂತನ ಕಟ್ಟಡವನ್ನು ರಾಜ್ಯ ಗೃಹ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊ್ಮಾಯಿ ಮಂಗಳವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಸಚಿವರು, ಗೃಹ ಇಲಾಖೆಯು ನೆರೆ, ಕೋವಿಡ್ ಸಂದರ್ಭದಲ್ಲಿ ಕಳೆದ ಒಂದು ವರ್ಷದಿಂದ ಮಂಚೂಣಿಯಲ್ಲಿ ನಿಂತು ಕೆಲಸ ಮಾಡಿಕೊಂಡು ಬಂದಿದೆ. ಆದುದರಿಂದ ಪೊಲೀಸ್ ಇಲಾಖೆಯ ಸಿಬಂದಿ ಗಳು ನಿಜವಾದ ಕೊರೋನಾ ವಾರಿಯರ್ಸ್‌ಗಳು ಎಂದು ಹೇಳಿದರು.

 ಈ ವರ್ಷ ಪೊಲೀಸ್ ಇಲಾಖೆಯನ್ನು ಆಧುನೀಕರಣಗೊಳಿಸಲಾಗುತ್ತದೆ. ಪೊಲೀಸ್ ಠಾಣೆ ನಿರ್ಮಾಣ, ವಸತಿ ವ್ಯವಸ್ಥೆ, ಪೊಲೀಸರಿಗೆ ಆರೋಗ್ಯ ಭಾಗ್ಯ ಅದರ ಜೊತೆ ಹೊಸ ಪರಿಕರಗಳನ್ನು ಇಲಾಖೆಗೆ ಒದಗಿಸಲಾಗಿದೆ. ಅಗ್ನಿಶಾಮಕ ಇಲಾಖೆಯಲ್ಲಿ ಕೂಡ ಹೊಸತನವನ್ನು ತರಲಾಗುತ್ತಿದೆ. ಜೈಲುಗಳಲ್ಲಿ ಸಹ ಸುಧಾರಣೆಗಳನ್ನು ತರಲಾಗಿದೆ ಎಂದರು.

ಈ ಸಂದರ್ಭದಲ್ಲಿ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಪಂ ಅಧ್ಯಕ್ಷ ದಿನಕರ ಬಾಬು, ಶಾಸಕರಾದ ರಘುಪತಿ ಭಟ್, ಸುಕುಮಾರ್ ಶೆಟ್ಟಿ, ಸುನೀಲ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಪಂ ಸಿಇಓ ಪ್ರೀತಿ ಗೆಹ್ಲೋಟ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಡಿವೈಎಸ್ಪಿಜೈಶಂಕರ್, ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ರಾಘವೇಂದ್ರ, ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತಪದ್ಮನಾಭ, ಕೋಟ ಠಾಣಾಧಿಕಾರಿ ಸಂತೋಷ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News