ಡಿ.ಜಿ.ಹಳ್ಳಿ ಹಿಂಸಾಚಾರ : ಪತ್ರಕರ್ತರ ಸಂಘ ಖಂಡನೆ
Update: 2020-08-12 20:06 IST
ಉಡುಪಿ, ಆ.12: ಬೆಂಗಳೂರಿನ ಡಿ.ಜಿ.ಹಳ್ಳಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ವರದಿ ಮಾಡಲು ಹೋಗಿದ್ದ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡಿ, ವಾಹನ ಜಖಂ ಮಾಡಿರುವುದನ್ನು ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಖಂಡಿಸಿದೆ.
ಹಲ್ಲೆಕೋರರ ಮೇಲೆ ಕೂಡಲೇ ಕಾನೂನು ಕ್ರಮ ಕೈಗೊಂಡು, ತಪ್ಪಿತಸ್ಥರನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು ಎಂದು ಸಂಘದ ಅಧ್ಯಕ್ಷರು, ಪ್ರಧಾನ ಕಾರ್ಯ ದರ್ಶಿಗಳು ಪ್ರಕಟಣೆಯಲ್ಲಿ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.