ಹಿರೇಬೆಟ್ಟು ಮೊರಾರ್ಜಿ ದೇಸಾಯಿ ಶಾಲೆ ಉತ್ತಮ ಸಾಧನೆ

Update: 2020-08-12 15:08 GMT
ಪ್ರತಾಪ್ ಮಲ್ಲಪ್ಪ

ಉಡುಪಿ, ಆ.12: 2019-20ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಪಟ್ಲ ಹಿರೇಬೆಟ್ಟು ಮೊರಾರ್ಜಿ ದೇಸಾಯಿ ವಸತಿ ಶಾಲೆ ಉತ್ತಮ ಸಾಧನೆಯನ್ನು ತೋರಿದೆ. ಈ ಬಾರಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಲ್ಲಿ 19 ಮಂದಿ ವಿಶಿಷ್ಟ ದರ್ಜೆಯಲ್ಲಿ ಹಾಗೂ 14ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಗೊಂಡಿದ್ದಾರೆ.

ಶಾಲೆಯ ಪ್ರತಾಪ್ ಮಲ್ಲಪ್ಪ ಹಳ್ಳಿ ಇವರು ಒಟ್ಟು 614 (ಶೇ.98.24) ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾನೆ. ಕನ್ನಡದಲ್ಲಿ ಒಬ್ಬ, ಹಿಂದಿಯಲ್ಲಿ ಮೂವರು ಹಾಗೂ ಸಮಾಜ ವಿಜ್ಞಾನದಲ್ಲಿ ಇಬ್ಬರು ವಿದ್ಯಾರ್ಥಿಗಳು 100 ಅಂಕಗಳನ್ನು ಗಳಿಸಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News