×
Ad

ಉಡುಪಿ ನಗರಸಭೆ ಪೌರಾಯುಕ್ತರಿಗೆ ಕೊರೋನ ಪಾಸಿಟಿವ್

Update: 2020-08-12 22:21 IST

ಉಡುಪಿ, ಆ.12: ಉಡುಪಿ ನಗರಸಭೆ ಪೌರಾಯುಕ್ತರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ನಗರಸಭೆ ಕಚೇರಿಯನ್ನು 72 ಗಂಟೆಗಳ ಅವಧಿಗೆ ಸೀಲ್‌ಡೌನ್ ಮಾಡಲಾಗಿದೆ.

ಆರೋಗ್ಯ ತಪಾಸಣೆ ವೇಳೆ ಕೊರೋನ ಪರೀಕ್ಷೆಗೆ ಒಳಗಾಗಿರುವ ಪೌರಾ ಯುಕ್ತರ ವರದಿ ಇಂದು ಪಾಸಿಟಿವ್ ಎಂಬುದಾಗಿ ಬಂದಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ. ಆದುದರಿಂದ ಕಚೇರಿಯನ್ನು ಸೀಲ್ ಡೌನ್ ಮಾಡಿ ಎರಡು ಬಾರಿ ಸ್ಯಾನಿಟೈಸ್ ಮಾಡಲಾಗುತ್ತದೆ.

ಕಚೇರಿ ಸೀಲ್‌ಡೌನ್ ಆದರೂ ಸಾರ್ವಜನಿಕರಿಗೆ ನಗರಸಭೆಯ ಮೂಲ ಭೂತ ಸೌಕರ್ಯಗಳಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಕೆಲವು ಅಧಿಕಾರಿಗಳು ಕ್ವಾರಂಟೈನ್‌ಗೆ ಒಳಗಾಗಾಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆ.11ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರಾಜ್ಯ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರ ಸಭೆಯಲ್ಲೂ ಪೌರಾಯುಕ್ತರು ಭಾಗವಹಿಸಿದ್ದರು. ಈ ಸಭೆಯಲ್ಲಿ 100ಕ್ಕೂ ಅಧಿಕ ಅಧಿಕಾರಿ ಗಳು ಹಾಗೂ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News