ಗಲಭೆ ಹಿಂದಿನ ಶಕ್ತಿಗಳನ್ನು ಬಯಲಿಗೆ ತನ್ನಿ: ಡಿವೈಎಫ್‌ಐ ಒತ್ತಾಯ

Update: 2020-08-12 16:59 GMT

 ಮಂಗಳೂರು, ಆ.12: ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ನಿಂದನೆ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಪ್ರದೇಶದಲ್ಲಿ ನಡೆದಿರುವ ಹಿಂಸಾಚಾರ ಖಂಡನೀಯ. ಜನತೆ ತಾಳ್ಮೆ ಕಳೆದುಕೊಳ್ಳದೆ ಸಹನೆಯಿಂದ ವರ್ತಿಸಬೇಕು. ಗಲಭೆ ಹಿಂದಿನ ಶಕ್ತಿಗಳನ್ನು ಬಯಲಿಗೆ ತರಬೇಕು ಎಂದು ರಾಜ್ಯ ಡಿವೈಎಫ್‌ಐ ಆಗ್ರಹಿಸಿದೆ.

ಪ್ರಚೋದಿಸುವ ಶಕ್ತಿಗಳ ಕುರಿತು ಮುಸ್ಲಿಂ ಸಮುದಾಯ ಎಚ್ಚರಿಕೆ ಇರಬೇಕು. ಇಷ್ಟು ದೊಡ್ಡ ಪ್ರಮಾಣದ ಹಿಂಸಾಚಾರ ದಿಢೀರ್‌ ಆಗಿ ನಡೆಯುವುದರ ಹಿಂದೆ ಕಾಣದ ಕೈಗಳ ವ್ಯವಸ್ಥಿತ ಪಿತೂರಿಯ ಸಾಧ್ಯತೆಗಳು ಕಂಡು ಬರುತ್ತಿವೆ. ಜನರ ಬದುಕಿನ ಜೊತೆ ಚೆಲ್ಲಾಟವಾಡುವ ಇಂತಹ ಶಕ್ತಿಗಳನ್ನು ನ್ಯಾಯಯುತ ತನಿಖೆಯ ಮೂಲಕ ಬಯಲಿಗೆ ತರಬೇಕು. ಹಿಂಸಾಚಾರದಲ್ಲಿ ಆಸ್ತಿಪಾಸ್ತಿ ನಷ್ಟಗೊಂಡವರಿಗೆ, ಗೋಲಿಬಾರ್‌ಗೆ ಬಲಿಯಾದವರಿಗೆ ಪರಿಹಾರ ಒದಗಿಸಬೇಕು ಎಂದು ಡಿವೈಎಫ್‌ಐ ರಾಜ್ಯ ಸಮಿತಿ ರಾಜ್ಯ ಸರಕಾರವನ್ನು ಆಗ್ರಹಿಸಿದೆ ಎಂದು ಡಿವೈಎಫ್‌ಐ ರಾಜ್ಯ ಅಧ್ಯಕ್ಷ ಮುನೀರ್ ಕಾಟಿಪಳ್ಳ, ರಾಜ್ಯ ಕಾರ್ಯದರ್ಶಿ ಪೂಜಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News