ವಿಪಕ್ಷ ನಾಯಕ ಸಿದ್ದರಾಮಯ್ಯ ಆ.13ರಂದು ಆಸ್ಪತ್ರೆಯಿಂದ ಬಿಡುಗಡೆ

Update: 2020-08-12 19:04 GMT

ಬೆಂಗಳೂರು, ಆ.12: ಕೊರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಈಗ ಪೂರ್ಣ ಗುಣಮುಖರಾಗಿದ್ದು, ಆ.13ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಎರಡನೆ ಬಾರಿ ನಡೆಸಿದ ಗಂಟಲು ದ್ರವ ಹಾಗೂ ರಕ್ತ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ. ಕಳೆದ ಮಂಗಳವಾರ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಆರಂಭದ ಎರಡು ದಿನ ಮಾತ್ರ ಜ್ವರ ಕಾಣಿಸಿಕೊಂಡಿತ್ತು. ಉಳಿದಂತೆ ಸೋಂಕಿನ ಲಕ್ಷಣ ಇರಲಿಲ್ಲ. ಇದೀಗ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News