ಎಸೆಸೆಲ್ಸಿ ಪರೀಕ್ಷೆ: ತುಳು ಭಾಷೆಯಲ್ಲಿ ವಿದ್ಯಾರ್ಥಿಗಳ ಉತ್ತಮ ಸಾಧನೆ

Update: 2020-08-13 08:56 GMT

ಮಂಗಳೂರು, ಆ.13: ಪ್ರಸಕ್ತ (2019-20ರ) ಶೈಕ್ಷಣಿಕ ಸಾಲಿನಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ತೃತೀಯ ಭಾಷೆಯಾಗಿ ತುಳುವಲ್ಲಿ ಪರೀಕ್ಷೆ ಬರೆದ 39 ಶಾಲೆಗಳ 924 ವಿದ್ಯಾರ್ಥಿಗಳ ಪೈಕಿ 917 ಮಂದಿ ತೇರ್ಗಡೆಯಾಗಿದ್ದು, ಶೇ.99 ಫಲಿತಾಂಶ ದಾಖಲಿಸಿದ್ದಾರೆ. 234 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಸಿದ್ದಾರೆ.

ಅವಿಭಜಿತ ದ.ಕ. ಜಿಲ್ಲೆಯ 42 ಶಾಲೆಗಳಲ್ಲಿ 6,7, 8, 9, 10ನೇ ತರಗತಿಗಳಲ್ಲಿ 2,568 ವಿದ್ಯಾರ್ಥಿಗಳು ತುಳುವನ್ನು ತೃತೀಯ ಭಾಷೆಯಾಗಿ ಕಲಿಯುತ್ತಿದ್ದಾರೆ.

ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ತುಳು ಪಠ್ಯ ಭೋದನೆಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು. ತೃತೀಯ ಐಚ್ಛಿಕ ಭಾಷೆಯಾಗಿ ತುಳುವನ್ನು ಆಯ್ಕೆ ಮಾಡುವುದರಿಂದ ವಿದ್ಯಾರ್ಥಿಗಳು ಹೆಚ್ಚಿನ ಅಂಕ ಗಳಿಸಲು ಸಾಧ್ಯವಾಗುತ್ತಿದ್ದು, ಈ ಮೂಲಕ ಶಾಲೆಗಳು ಕೂಡಾ ಫಲಿತಾಂಶದಲ್ಲಿ ದಾಖಲೆ ನಿರ್ಮಿಸುತ್ತಿದೆ. ತುಳುವಿನಲ್ಲಿ ಉತ್ತಮ ಸಾಧನೆ ದಾಖಲಿಸುವ ಮೂಲಕ ಶಾಲೆಗಳ ಹಾಗೂ ಜಿಲ್ಲೆಯ ಒಟ್ಟು ಫಲಿತಾಂಶದಲ್ಲಿ ಏರಿಕೆಯಾಗಿದೆ. ಇದಕ್ಕೆ ಕಾರಣರಾದ ಉಭಯ ಜಿಲ್ಲೆಗಳ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲೆಗಳ ಮುಖ್ಯ ಶಿಕ್ಷಕರು, ತುಳು ಭಾಷಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಅಭಿನಂದನಾರ್ಹರು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ಸಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News