ಸೆಪ್ಟೆಂಬರ್ ನಲ್ಲಿ ಎಸೆಸೆಲ್ಸಿ ಪೂರಕ ಪರೀಕ್ಷೆ: ಪರೀಕ್ಷಾ ನೋಂದಣಿಗೆ ಆ.24 ಅಂತಿಮ ದಿನ

Update: 2020-08-13 11:59 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.13: ಎಸೆಸೆಲ್ಸಿ ಪೂರಕ ಪರೀಕ್ಷೆ ಸೆಪ್ಟೆಂಬರ್ ನಲ್ಲಿ ನಡೆಯಲಿದ್ದು, ಅರ್ಹ ಪುನರಾವರ್ತಿತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಜೂನ್-ಜುಲೈನಲ್ಲಿ ನಡೆದ ಎಸೆಸೆಲ್ಸಿ ಪರೀಕ್ಷೆಗೆ ಕೋವಿಡ್-19, ಅಪಘಾತ, ಅನಾರೋಗ್ಯ ಸೇರಿದಂತೆ ಮತ್ತಿತರ ಸಮಸ್ಯೆಗಳಿಂದ ಗೈರು ಹಾಜರಾಗಿದ್ದ ವಿದ್ಯಾರ್ಥಿಗಳು, ಸೆಪ್ಟೆಂಬರ್-2020ರಲ್ಲಿ ನಡೆಸಲಾಗುವ ಎಸೆಸೆಲ್ಸಿ ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಲ್ಲಿ ಮಾತ್ರ ಪ್ರಥಮ ಅವಕಾಶವೆಂದು ಪರಿಗಣಿಸಲಾಗುತ್ತದೆ. ಇಂತಹ ವಿದ್ಯಾರ್ಥಿಗಳು ಜೂನ್‍ನಲ್ಲಿ ನಡೆದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿಲ್ಲವೆಂದು ಪೋಷಕರಿಂದ ಲಿಖಿತ ಹೇಳಿಕೆ ಪಡೆದು ಶಾಲೆಯ ಕಡತದಲ್ಲಿರಿಸಬೇಕು.

ಜೂನ್‍ನಲ್ಲಿ ನಡೆದ ಪರೀಕ್ಷೆಯಲ್ಲಿ ಎಲ್ಲ ಆರು ವಿಷಯಗಳಿಗೆ ಹಾಜರಾಗಿದ್ದು, ಯಾವುದಾದರು ವಿಷಯಗಳಲ್ಲಿ ಅನುತ್ತೀರ್ಣರಾಗಿ ಸೆಪ್ಟೆಂಬರ್-2020ರ ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಲ್ಲಿ ಅಂತಹ ಅಭ್ಯರ್ಥಿಗಳನ್ನು ಅನುತ್ತೀರ್ಣ ವಿದ್ಯಾರ್ಥಿಗಳೆಂದು ಹಾಗೂ 2ನೇ ಪ್ರಯತ್ನ ಎಂದು ಪರಿಗಣಿಸಲಾಗುತ್ತದೆ.

2002-03ರಿಂದ 2019-20ರ ಎಸೆಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳನ್ನು ಶಾಲಾ ಮುಖ್ಯೋಪಾಧ್ಯಾಯರು ಮಂಡಳಿಯ www.kseeb.kar.nic.in ಜಾಲತಾಣದ ಶಾಲಾ ಲಾಗಿನ್‍ನಲ್ಲಿ Registration for September 2020 Examನ್ನು ಕ್ಲಿಕ್ ಮಾಡಿದಾಗ upload Repeaters Detail ಎನ್ನುವ ಆಯ್ಕೆ ದೊರಕುತ್ತದೆ. ಈ ಆಯ್ಕೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆಯನ್ನು ನಮೂದು ಮಾಡಲು ಅವಕಾಶ ನೀಡಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

-ಒಂದು ವಿಷಯಕ್ಕೆ 320 ರೂ.ಶುಲ್ಕ ನಿಗದಿಪಡಿಸಲಾಗಿದೆ. ಎರಡು ವಿಷಯಕ್ಕೆ 386 ರೂ. ಹಾಗೂ ಮೂರು ಅದಕ್ಕಿಂತ ಮೇಲ್ಪಟ್ಟ ವಿಷಯಗಳಿಗೆ 520 ರೂ.ಇದೆ.

-ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಹಾಗೂ ಕೋವಿಡ್ ಹಿನ್ನೆಲೆಯಲ್ಲಿ ಜೂನ್-ಜುಲೈನಲ್ಲಿ ನಡೆದ ಪರೀಕ್ಷೆಗೆ ಗೈರು ಹಾಜರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

-ಪರೀಕ್ಷಾರ್ಥಿಗಳಿಂದ ಪರೀಕ್ಷಾ ಶುಲ್ಕ ಸ್ವೀಕರಿಸಲು ಮತ್ತು ಆನ್‍ಲೈನ್‍ನಲ್ಲಿ ವಿದ್ಯಾರ್ಥಿಗಳ ವಿವರಗಳನ್ನು ಅಪ್‍ಲೋಡ್ ಮಾಡಲು ಆ.20 ಕೊನೆಯ ದಿನವಾಗಿದೆ. ಹಾಗೂ 200ರೂ.ದಂಡ ಶುಲ್ಕದೊಂದಿಗೆ ಆ.24 ಅಂತಿಮ ದಿನವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News