ಕೊರೋನದಿಂದ ಗುಣಮುಖ: ಸಿದ್ದರಾಮಯ್ಯ ಆಸ್ಪತ್ರೆಯಿಂದ ಬಿಡುಗಡೆ

Update: 2020-08-13 12:19 GMT

ಬೆಂಗಳೂರು, ಆ.13: ಕೊರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಎರಡನೇ ಬಾರಿ ನಡೆಸಿದ ಗಂಟಲು ದ್ರವ ಹಾಗೂ ರಕ್ತ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ. ಕಳೆದ ಮಂಗಳವಾರ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಆರಂಭದ ಎರಡು ದಿನ ಮಾತ್ರ ಜ್ವರ ಕಾಣಿಸಿಕೊಂಡಿತ್ತು. ಉಳಿದಂತೆ ಸೋಂಕಿನ ಲಕ್ಷಣ ಇರಲಿಲ್ಲ. ಇದೀಗ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.

ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು, 'ಕೊರೋನ ಸೋಂಕಿನಿಂದ ಗುಣಮುಖನಾಗಿ ಇಂದು ಆಸ್ಪತ್ರೆಯಿಂದ ಮನೆಗೆ‌ ಮರಳಿದ್ದೇನೆ. ಕಳೆದ 10 ದಿನಗಳಲ್ಲಿ‌ ಜತನದಿಂದ ನನ್ನ ಆರೈಕೆ ಮಾಡಿದ ಮಣಿಪಾಲ್ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗಕ್ಕೆ ನನ್ನ ತುಂಬು ಹೃದಯದ ಧನ್ಯವಾದಗಳು. ವೈದ್ಯರ ಸಲಹೆಯಂತೆ ಒಂದು ವಾರ ಮನೆಯಲ್ಲಿ ವಿಶ್ರಾಂತಿ‌ ಪಡೆಯಲಿದ್ದೇನೆ'. 

ಕೊರೋನ ಸೋಂಕಿನ ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿದ ದಿನದಿಂದ ಕಾಂಗ್ರೆಸ್ ಮತ್ತು ಬೇರೆ ರಾಜಕೀಯ ಪಕ್ಷಗಳ ನಾಯಕರು, ಕಾರ್ಯಕರ್ತರು, ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು‌ ಎಲ್ಲಕ್ಕಿಂತ ಮಿಗಿಲಾಗಿ ರಾಜ್ಯದ ಜನತೆ ಕಾಳಜಿಯಿಂದ ನನ್ನ ಆರೋಗ್ಯಕ್ಕಾಗಿ ಹಾರೈಸಿದ್ದಾರೆ. ಅವರೆಲ್ಲರಿಗೂ ಆಭಾರಿಯಾಗಿದ್ದೇನೆ, ಧನ್ಯವಾದಗಳು'' ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News