ಶಾಸಕ ಲಾಲಾಜಿ ಮೆಂಡನ್‍ಗೆ ಕೊರೋನ ಪಾಸಿಟಿವ್ ದೃಢ

Update: 2020-08-13 16:28 GMT

ಕಾಪು : ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಅರ್. ಮೆಂಡನ್ ಅವರಿಗೆ ಕೋವಿಡ್-19 ಪಾಸಿಟಿವ್ ದೃಢವಾಗಿದೆ.

ಈ ಬಗ್ಗೆ ಅವರು ತಮ್ಮ ಫೇಸ್‍ಬುಕ್ ಪೇಜ್‍ನಲ್ಲಿ ಪ್ರಕಟಿಸಿದ್ದು, ನನ್ನ ಆಪ್ತ ಕಾರ್ಯದರ್ಶಿಯೋರ್ವರಿಗೆ  ಕೋವಿಡ್ 19 ಪಾಸಿಟಿವ್ ಬಂದ ಹಿನ್ನಲೆ ಕಳೆದ 7 ದಿನಗಳಿಂದ ಹೋಂ ಕಾರಂಟೈನ್ ನಲ್ಲಿದ್ದು, ಮುಂಜಾಗೃತಾ ಕ್ರಮವಾಗಿ ನಾನು ಪರೀಕ್ಷೆ ಮಾಡಿಸಿದಾಗ ಕೋವಿಡ್ 19  ಸೋಂಕು ದೃಢಪಟ್ಟಿದೆ. ಯಾವುದೇ ಸೋಂಕಿನ ಲಕ್ಷಣಗಳು ಇಲ್ಲದಿರುವುದರಿಂದ ಕೋವಿಡ್ ಕೇರ್ ಸೆಂಟರ್ ನಲ್ಲಿ ಶೂಶ್ರುಷೆ ಪಡೆಯುತ್ತಿದ್ದೇನೆ. ಅಗತ್ಯ ಕಾರ್ಯಗಳಿಗೆ ಕಚೇರಿಯನ್ನು ಸಂಪರ್ಕಿಸಿ. ನಾನು ಆದಷ್ಟು ಬೇಗ ಕಾಪು ಜನತೆಯ ಸೇವೆಗೆ ಮರಳುತ್ತೇನೆ, ತಮ್ಮ ಸಹಕಾರವಿರಲಿ ಎಂದು ಕೋರಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News