×
Ad

ಕ್ರೈಸ್ತ ಸನ್ಯಾಸಿನಿ ಅತ್ಯಾಚಾರ ಪ್ರಕರಣ: ಫ್ರಾಂಕೊ ಮುಳಕ್ಕಲ್ ವಿರುದ್ಧ ದೋಷಾರೋಪ ಸಿದ್ಧ

Update: 2020-08-13 22:26 IST

ತಿರುವನಂತಪುರಂ, ಆ.13: ಕೇರಳದ ಕೈಸ್ತ ಸನ್ಯಾಸಿನಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಕೊಟ್ಟಾಯಂ ನ್ಯಾಯಾಲಯ ಜಾಲಂಧರ್ ಕ್ರೈಸ್ತ ಧರ್ಮಪ್ರಾಂತ್ಯದ ಮಾಜಿ ಬಿಷಪ್ ಫ್ರಾಂಕೊ ಮುಲಕ್ಕಳ್ ವಿರುದ್ಧ ಗುರುವಾರ ದೋಷಾರೋಪ ಸಿದ್ಧಗೊಳಿಸಿದೆ.

ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿ ರೂಪಿಸಲಾಗಿರುವ ದೋಷಾರೋಪದ ವಿವರವನ್ನು ಹೆಚ್ಚುವರಿ ಸೆಷನ್ಸ್ ಕೋರ್ಟ್ ನ್ಯಾಯಾಧೀಶರು ನ್ಯಾಯಾಲಯದಲ್ಲಿ ಹಾಜರಿದ್ದ ಮುಳಕ್ಕಲ್ ಓದಿ ಹೇಳಿದರು. ಇದನ್ನು ಆರೋಪಿ ನಿರಾಕರಿಸಿದ್ದು ಮುಂದಿನ ವಿಚಾರ ಣೆಯನ್ನು ಸೆಪ್ಟೆಂಬರ್ 16ಕ್ಕೆ ನಿಗದಿಗೊಳಿಸಲಾಗಿದೆ. ಕಳೆದ ವಾರ ನ್ಯಾಯಾಲಯ ಕಠಿಣ ಶರತ್ತುಗಳನ್ನು ವಿಧಿಸಿ ಬಿಷಪ್‌ಗೆ ಜಾಮೀನು ನೀಡಿತ್ತು ಮತ್ತು ಪ್ರಕರಣಕ್ಕೆ ಸಂಬಂಧಿಸಿ ನಡೆಯುವ ನ್ಯಾಯಾಲಯ ಕಲಾಪದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಸೂಚಿಸಿತ್ತು.

2014ರಿಂದ 2016ರ ನಡುವಿನ ಅವಧಿಯಲ್ಲಿ ಬಿಷಪ್ ಮುಳಕ್ಕಲ್ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದರು ಎಂದು ಕ್ರೈಸ್ತ ಸನ್ಯಾಸಿನಿ 2018ರ ಜೂನ್‌ನಲ್ಲಿ ದೂರು ನೀಡಿದ್ದರು. ಇದರಂತೆ ಕೊಟ್ಟಾಯಂ ಜಿಲ್ಲಾ ಪೊಲೀಸರು ಬಿಷಪ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಪ್ರಕರಣದ ತನಿಖೆ ನಡೆಸಿದ್ದ ವಿಶೇಷ ತನಿಖಾ ತಂಡ ಬಿಷಪ್‌ರನ್ನು ಬಂಧಿಸಿತ್ತು. ತನ್ನ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣ ಕೈಬಿಡುವಂತೆ ಕೋರಿ ಮುಳಕ್ಕಲ್ ಮೊದಲು ವಿಚಾರಣಾ ನ್ಯಾಯಾಲಯಕ್ಕೆ, ಬಳಿಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು ಎರಡೂ ನ್ಯಾಯಾಲಯಗಳಲ್ಲಿ ಅರ್ಜಿ ತಿರಸ್ಕೃತಗೊಂಡಿತ್ತು.

ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಲಾಗಿರುವ ಮೇಲ್ಮನವಿಯೂ ತಿರಸ್ಕೃತವಾಗಿದ್ದು, ವಿಚಾರಣೆ ಎದುರಿಸುವಂತೆ ಸರ್ವೋಚ್ಛ ನ್ಯಾಯಾಲಯ ಸ್ಪಷ್ಟಪಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News