ಕಾನೂನು ಹೋರಾಟದಲ್ಲಿ ನಿಮ್ಮ ಜೊತೆ ಇರುತ್ತೇನೆ: ಝಮೀರ್ ಅಹ್ಮದ್ ಖಾನ್

Update: 2020-08-13 17:20 GMT

ಬೆಂಗಳೂರು, ಆ.13: ಪ್ರವಾದಿ ಅರರನ್ನು ವ್ಯಕ್ತಿಯೊಬ್ಬ ನಿಂದಿಸಿರುವುದು ವೈಯಕ್ತಿಕವಾಗಿ ನನಗೂ ಸಾಕಷ್ಟು ನೋವಾಗಿದೆ. ನಮ್ಮ ನೋವು, ಆಕ್ರೋಶವನ್ನು ಕಾನೂನು ಹೋರಾಟದ ಮೂಲಕ ತೋರಿಸಿ, ಕಠಿಣ ಶಿಕ್ಷೆಗೆ ಆಗ್ರಹಿಸಬೇಕೇ ಹೊರತು, ಅಶಾಂತಿಯ ಮೂಲಕವಲ್ಲ. ನ್ಯಾಯಕ್ಕಾಗಿ ನಡೆಸುವ ಕಾನೂನು ಹೋರಾಟದಲ್ಲಿ ನಾನೂ ನಿಮ್ಮ ಜೊತೆಗಿರುತ್ತೇನೆ ಎಂದು ಸಮುದಾಯಕ್ಕೆ ಮಾಜಿ ಸಚಿವ ಝಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಲಿಬಾರ್ ನಿಂದ ಮೃತಪಟ್ಟ ಯುವಕರ ಮನೆಗೆ ನಿನ್ನೆ ಭೇಟಿ ನೀಡಿದ್ದೆ, ನಿಜಕ್ಕೂ ಅವರ ಕುಟುಂಬಗಳ ಪರಿಸ್ಥಿತಿ ಕಂಡು ಕಣ್ಣೀರು ಬಂತು. ಇದ್ದ ಒಬ್ಬ ಮಗನನ್ನು ಕಳೆದುಕೊಂಡ ತಾಯಿ, ತಂಗಿಗೆ ಯಾರು ದಿಕ್ಕು? ಯಾರೋ ಕಿಡಿಗೇಡಿಗಳು ಕಲ್ಲು ತೂರಿ, ಬೆಂಕಿ ಹಚ್ಚಿದರು, ಬಲಿಯಾದವರು ಇನ್ಯಾರೋ ಎಂದರು.

ಹಿರಿಯ ಪೊಲೀಸ್ ಅಧಿಕಾರಿಗಳು, ಧಾರ್ಮಿಕ ಮುಖಂಡರೊಂದಿಗೆ ಚರ್ಚೆ ಮಾಡಿದ್ದೇನೆ. ತಪ್ಪಿತಸ್ಥರಿಗೆ ಖಂಡಿತಾ ಕಠಿಣ ಶಿಕ್ಷೆ ಆಗಲಿದೆ. ಗಾಳಿ ಸುದ್ದಿಗಳಿಗೆ ಕಿವಿ ಕೊಡಬೇಡಿ, ಕಾನೂನು ಹೋರಾಟದ ಮೂಲಕ ನ್ಯಾಯ ಪಡೆಯುವ ನಮ್ಮ ನಿರ್ಧಾರ ಅಚಲವಾಗಿರಲಿ. ಶಾಂತಿ, ಸೌಹಾರ್ದತೆಗೆ ಎಲ್ಲರೂ ಸಹಕರಿಸಿ ಎಂದು ಕೈ ಮುಗಿದು ಮನವಿ ಮಾಡುತ್ತೇನೆ ಎಂದು ಝಮೀರ್ ಅಹ್ಮದ್ ಖಾನ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News