ವಿಶ್ವಾಸಮತದ ವೇಳೆ ಕಾಂಗ್ರೆಸ್ ವಿರುದ್ಧ ಮತ ಹಾಕಿ: ಬಿಎಸ್ಪಿ ಶಾಸಕರಿಗೆ ಮಾಯಾವತಿ ಸೂಚನೆ

Update: 2020-08-14 04:43 GMT

ಜೈಪುರ, ಆ.14: ರಾಜಸ್ಥಾನದಲ್ಲಿ ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷದಿಂದ ಕಾಂಗ್ರೆಸ್‌ದೊಂದಿಗೆ ವಿಲೀನಗೊಂಡಿರುವ ಆರು ಬಿಎಸ್ಪಿ ಶಾಸಕರಿಗೆ ಶುಕ್ರವಾರ ಇಲ್ಲಿ ಆರಂಭವಾಗಲಿರುವ ವಿಶೇಷ ಅಧಿವೇಶನದಲ್ಲಿ ವಿಶ್ವಾಸಮತ ಯಾಚನೆ ನಡೆದರೆ ಕಾಂಗ್ರೆಸ್ ವಿರುದ್ಧ ಮತ ಚಲಾಯಿಸುವಂತೆ ತನ್ನ ಶಾಸಕರಿಗೆ ಮಾಯಾವತಿ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 ಬಹುಜನ ಸಮಾಜ ಪಕ್ಷ ಗುರುವಾರ ತನ್ನ ಪಕ್ಷದ ಶಾಸಕರಿಗೆ ವಿಪ್ ನೀಡಿದ್ದು, ವಿಪ್‌ನ್ನು ಉಲ್ಲಂಘಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
ಮಹತ್ವದ ಬೆಳವಣಿಗೆಯಲ್ಲಿ ಸುಪ್ರೀಂಕೋರ್ಟ್ ಗುರುವಾರದ ತನ್ನ ಆದೇಶದಲ್ಲಿ ಆರು ಬಿಎಸ್ಪಿ ಶಾಸಕರಿಗೆ ಅಧಿವೇಶನದಲ್ಲಿ ಭಾಗವಹಿಸಿ ವಿಶ್ವಾಸಮತ ಯಾಚನೆಯ ವೇಳೆ ಮತ ಚಲಾಯಿಸುವ ಅವಕಾಶ ನೀಡಿದೆ.
ಬಿಜೆಪಿ ಶಾಸಕ ಮದನ್ ದಿಲಾವರ್ ಬಿಎಸ್ಪಿ ಶಾಸಕರು ಕಾಂಗ್ರೆಸ್‌ನೊಂದಿಗೆ ವಿಲೀನವಾಗಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ಶುಕ್ರವಾರ ರಾಜಸ್ಥಾನ ಹೈಕೋರ್ಟ್ ವಿಚಾರಣೆ ನಡೆಸುವ ಸಾಧ್ಯತೆಯಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News