ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ

Update: 2020-08-14 12:09 GMT

ಚೆನ್ನೈ, ಆ.14: ಇತ್ತೀಚೆಗಷ್ಟೇ ಕೊರೋನ ವೈರಸ್ ಸೋಂಕು ಪೀಡಿತರಾಗಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತುರ್ತು ನಿಗಾ ಘಟಕ(ಐಸಿಯು)ಕ್ಕೆ ವರ್ಗಾಯಿಸಲಾಗಿದ್ದು, ಜೀವರಕ್ಷಕ ವ್ಯವಸ್ಥೆಯಲ್ಲಿದ್ದಾರೆ ಎಂದು ವರದಿಯಾಗಿದೆ.

ಆಗಸ್ಟ್ ಮೊದಲ ವಾರದಲ್ಲಿ ಎಸ್‌ಪಿಬಿಗೆ ಕೊರೋನ ಸೋಂಕು ತಗಲಿತ್ತು. ಆಗಸ್ಟ್ 13ರಂದು ತಡರಾತ್ರಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ವೈದ್ಯರುಗಳ ತಂಡ ಅವರ ಚಿಕಿತ್ಸೆಯ ಹೊಣೆ ಹೊತ್ತಿದೆ. ಅವರ ಆರೋಗ್ಯ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಎಸ್‌ಪಿಬಿ ಅವರಿಗೆ ಆಗಸ್ಟ್ 5ರಂದು ಕೊರೋನದ ಸೋಂಕಿನ ಲಕ್ಷಣ ಕಾಣಿಸಿಕೊಂಡಾಗ ಎಂಜಿಎಂ ಹೆಲ್ತ್‌ಕೇರ್‌ಗೆ ದಾಖಲಿಸಲಾಗಿತ್ತು. ಆಗಸ್ಟ್ 13 ರಂದು ಅವರ ಆರೋಗ್ಯ ಬಿಗಡಾಯಿಸಿತ್ತು. ತಜ್ಞರಸಲಹೆಯ ಮೇರೆಗೆ ವೈದ್ಯಕೀಯ ತಂಡ ಅವರನ್ನು ನೋಡಿಕೊಳ್ಳುತ್ತಿದೆ.ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿದೆ. ಅವರಿಗೆ ಜೀವರಕ್ಷಕ ವ್ಯವಸ್ಥೆ ಮಾಡಲಾಗಿದ್ದು,ಪರಿಸ್ಥಿತಿ ಗಂಭೀರವಾಗಿದೆ. ಐಸಿಯುನ ತಜ್ಞ ವೈದ್ಯರು ಅವರ ನಿಗಾವಹಿಸಿದ್ದಾರೆ ಎಂದು ಪತ್ರಿಕಾಹೇಳಿಕೆಯೊಂದರಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News