ಬೆಂಗಳೂರು ಹಿಂಸಾಚಾರ ಪ್ರಕರಣ: ಕಾರ್ಪೊರೇಟರ್ ಪತಿ ಸೇರಿ ಮತ್ತೆ 60 ಮಂದಿ ಬಂಧನ

Update: 2020-08-14 12:14 GMT

ಬೆಂಗಳೂರು, ಆ.14: ನಗರದ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ಪೊಲೀಸರು ಇಲ್ಲಿಯವರೆಗೆ ಕಾರ್ಪೊರೇಟರ್ ಪತಿ ಸೇರಿ ಒಟ್ಟು 206 ಮಂದಿಯನ್ನು ಬಂಧಿಸಿದ್ದಾರೆ.

ಗುರುವಾರ ಮತ್ತು ಶುಕ್ರವಾರ ಕಾರ್ಪೊರೇಟರ್ ಪತಿ ಖಲೀಂ ಪಾಷ ಸೇರಿ 60 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನದ ಕಾರ್ಯ ಇನ್ನೂ ಮುಂದುವರಿದಿದೆ. ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಬೆಂಕಿ ಹಚ್ಚಿ ದಾಂಧಲೆ ನಡೆಸಿದ ಕುರಿತು ಇದುವರೆಗೂ 22 ಎಫ್‍ಐಆರ್ ದಾಖಲಾಗಿವೆ. ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ 11 ಪ್ರಕರಣ ಹಾಗೂ ಕೆಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ 11 ಪ್ರಕರಣಗಳು ದಾಖಲಾಗಿವೆ.

ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ವ್ಯಾಪ್ತಿಗಳಲ್ಲಿ ಸ್ಥಳೀಯ ಪೊಲೀಸರ ಜತೆಗೆ ಮೂರು ಕಂಪೆನಿ ಅರೆಸೇನಾ ಪಡೆ, 13 ಕೆಎಸ್‍ಆರ್‍ಪಿ ತುಕಡಿ ಮತ್ತು 2 ಸಿಎಆರ್ ತುಕಡಿಗಳನ್ನು ಬಂದೋಬಸ್ತ್ ಗಾಗಿ ನಿಯೋಜಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News