ಭಟ್ಕಳ: ಹಳೆ ದ್ವೇಷ; ಕತ್ತಿಯಿಂದ ಕಡಿದು ವ್ಯಕ್ತಿಯ ಕೊಲೆ

Update: 2020-08-14 14:44 GMT

ಭಟ್ಕಳ: ತಾಲೂಕಿನ ಬೆಣಂದೂರು ಗ್ರಾಮದಲ್ಲಿ ವ್ಯಕ್ತಿಯೋರ್ವನನ್ನು ಹಳೆ ದ್ವೇಷಕ್ಕಾಗಿ ಕೊಲೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಪದ್ಮಯ್ಯ ಜಟ್ಟಪ್ಪ ನಾಯ್ಕ (44) ಎಂದು ಗುರುತಿಸಲಾಗಿದೆ. ಇಂದು ಸಂಜೆ ಸುಮಾರಿಗೆ ಶಿರೂರಿನಲ್ಲಿರುವ ಹಾಲಿನ ಡೈರಿಗೆ ಹಾಲು ನೀಡಿ ಹೋಗುತ್ತಿದ್ದ ಸಂದರ್ಭ ಸುಮಾರು 22 ಮಂದಿಯ ತಂಡ ಕೊಲೆ ಮಾಡಿರುವುದಾಗಿ ಶಂಕೆ ವ್ಯಕ್ತವಾಗಿದೆ.

ಈ ಹಿಂದೆ ಜಮೀನಿನ ವಿಚಾರಕ್ಕಾಗಿ ಕೊಲೆಯಾದ ವ್ಯಕ್ತಿ ಹಾಗೂ ಇನ್ನೊಂದು ಗುಂಪಿನ ವಿರುದ್ಧ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿತ್ತು. ತಾಲೂಕಾಸ್ಪತ್ರೆಗೆ ಎಎಸ್ಪಿ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News