ಬಂಟಕಲ್ : ಪದವಿಪೂರ್ವ ಕಾಲೇಜಿನ ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ

Update: 2020-08-14 15:11 GMT

ಶಿರ್ವ, ಆ.14: ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಐ.ಎಸ್.ಟಿ.ಇ. ಘಟಕದ ಆಶ್ರಯದಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪದವಿಪೂರ್ವ ಕಾಲೇಜಿನ ಪ್ರಾಧ್ಯಾಪಕರಿಗೆ ಆನ್‌ಲೈನ್ ಬೋಧನಾ ಸಾಧನಗಳು ಎಂಬ ವಿಷಯದಲ್ಲಿ ಮೂರು ದಿನಗಳ ಕಾರ್ಯಾ ಗಾರವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.

ಕಾರ್ಯಾಗಾರವನ್ನು ಸಂಸ್ಥೆಯ ಪ್ರಾಂಶುಪಾಲ ಪ್ರೊ.ಡಾ.ತಿರುಮಲೇಶ್ವರ ಭಟ್ ಉದ್ಘಾಟಿಸಿದರು. 15 ಪದವಿಪೂರ್ವ ಕಾಲೇಜಿನ 30ಕ್ಕೂ ಅಧಿಕ ಪ್ರಾಧ್ಯಾಪಕರು ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಸಮಾರೋಪ ಸಮಾರಂಭದಲ್ಲಿ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿ ಷ್ಠಾನದ ಕಾರ್ಯದರ್ಶಿ ರತ್ನಕುಮಾರ್ ಮಾತನಾಡಿ, ಮೌಲ್ಯಯುಕ್ತ ಸಮಾಜ ನಿರ್ಮಾಣವಾದರೆ, ದೇಶದ ರಕ್ಷಣೆ, ಕಾನೂನು ಸುವ್ಯವಸ್ಥೆ ನಿರ್ವಹಣೆಗೆ ಮಾಡುವ ವೆಚ್ಚವನ್ನು ಕಡಿಮೆ ಮಾಡಿ, ಅದನ್ನು ನೂತನ ತಂತ್ರಜ್ಞಾನದ ಆವಿಷ್ಕಾರ ಮೊದಲಾದ ರಚನಾತ್ಮಕ ಕಾರ್ಯಗಳಿಗೆ ಉಪಯೋಗಿಸಿ ಆತ್ಮ ನಿರ್ಭರ್ ಭಾರತದ ನಿರ್ಮಾಣಕ್ಕೆ ಸಹಕಾರಿ ಯಾಗಬಹುದು ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ಡಾ.ತಿರುಮಲೇಶ್ವರ ಭಟ್ ಸ್ವಾಗತಿಸಿದರು. ಕಾರ್ಯಾಗಾರದ ಸಂಯೋಜಕ ವೇಣುಗೋಪಾಲ್ ರಾವ್ ವಂದಿಸಿದರು. ಉಪ ಪ್ರಾಂಶುಪಾಲ ಡಾ.ಗಣೇಶ್ ಐತಾಳ್ ಮೊದಲಾದವರು ಉಪಸ್ಥಿತರಿ ದ್ದರು. ಗಣಕಯಂತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರಮ್ಯಶ್ರೀ ಕಾರ್ಯ ಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News