ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
Update: 2020-08-14 21:41 IST
ಉಡುಪಿ, ಆ.14: ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ ಮಣಿಪಾಲ, ಉಡುಪಿ ಇಲ್ಲಿಗೆ ಸಲ್ಲಿಸಬೇಕು ಅಥವಾ ದೂರವಾಣಿ ಸಂಖ್ಯೆ:0820-2574972, 0820-2574978 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಪ್ರಕಟಣೆ ತಿಳಿಸಿದೆ.