ಬೆಂಗಳೂರು: ರಂಗೋಲಿಯಲ್ಲಿ ಅರಳಿದ ಬೃಹತ್ ತ್ರಿವರ್ಣ ಧ್ವಜ

Update: 2020-08-14 18:04 GMT

ಬೆಂಗಳೂರು, ಆ.14: ನಗರದ ಸಪ್ತಗಿರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ 74ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಬೃಹತ್ ತ್ರಿವರ್ಣ ಧ್ವಜದ ರಂಗೋಲಿ ಬಿಡಿಸಿದ್ದಾರೆ.

ಸಂಸ್ಥೆಯ 2,750ಕ್ಕೂ ಹೆಚ್ಚು ವಿದ್ಯಾರ್ಥಿಗಳ ಜೊತೆ ಪ್ರಾಂಶುಪಾಲರು, ಉಪನ್ಯಾಸಕರು ಕಾಲೇಜು ಆಟದ ಮೈದಾನದಲ್ಲಿ ಹಗಲಿರುಳು ಶ್ರಮಿಸಿ ಬೃಹತ್ ತ್ರಿವರ್ಣ ಧ್ವಜದ ರಂಗೋಲಿ ಬಿಡಿಸಿದ್ದಾರೆ.

ಈ ಧ್ವಜಕ್ಕೆ 2,500 ಕೆ.ಜಿ ಉಪ್ಪು, 250 ಕೆ.ಜಿ ಕೇಸರಿ, ಬಿಳಿ, ಹಸಿರು ಬಣ್ಣ ಬಳಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ತ್ರಿವರ್ಣ ಧ್ವಜ ಬಿಡಿಸುವ ರಂಗೋಲಿ ಸ್ಪರ್ಧೆಯನ್ನು ಕೂಡ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ 2,750ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ರೀತಿಯ ತ್ರಿವರ್ಣ ಧ್ವಜ ಬಿಡಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಪ್ರಾಂಶುಪಾಲ ಡಾ. ಹೆಚ್.ರಾಮಕೃಷ್ಣ, ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯಂದು ಕೊರೋನ ವಾರಿಯರ್ ಗಳಾದ ಪೊಲೀಸರು, ವೈದ್ಯಕೀಯ ಸಿಬ್ಬಂದಿ, ಸಾಮಾಜಿಕ ಕಾರ್ಯಕರ್ತರು, ಬಿಬಿಎಂಪಿ ಪೌರ ಕಾರ್ಮಿಕರು, ಆಂಬ್ಯುಲೆನ್ಸ್ ಚಾಲಕರು ಹಾಗು ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ತಿಳಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News