ಕೋವಿಡ್ ಎದುರಿಸುವಲ್ಲಿ ದ.ಕ. ಜಿಲ್ಲಾಡಳಿತದಿಂದ ಸಮರ್ಥ ಹೆಜ್ಜೆ: ಸಚಿವ ಕೋಟ

Update: 2020-08-15 04:35 GMT

ಮಂಗಳೂರು, ಆ.15: ಮಾನವ ಜೀವಕ್ಕೆ ಸೆಡ್ಡು ಹೊಡೆದು ನಿಂತಿರುವ ಕೊರೋನ ವೈರಸ್ ಸೋಂಕನ್ನು ಎದುರಿಸುವಲ್ಲಿ ದ.ಕ. ಜಿಲ್ಲಾಡಳಿತ ದಿಟ್ಟ ಹೆಜ್ಜೆ ಇರಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ನಗರದ ನೆಹರೂ ಮೈದಾನದಲ್ಲಿ ನಡೆದ ದ.ಕ. ಜಿಲ್ಲಾ ಮಟ್ಟದ 74ನೇ ಸರಳ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಗೌರವವಂದನೇ ಸ್ವೀಕರಿಸಿದ ಬಳಿಕ ಅವರು ಸಂದೇಶ ನೀಡಿದರು.

ಕೋವಿಡ್ ಅನಿರೀಕ್ಷಿತ ಆಗಮನ ಆತಂಕಕ್ಕೀಡು ಮಾಡಿದ್ದರೂ ಸವಾಲಾಗಿ ಸ್ವೀಕರಿಸಿ ರಾಜಿ ಮಾಡಿಕೊಳ್ಳದೆ ಉತ್ಕೃಷ್ಟ ಮಟ್ಟದ ಚಿಕಿತ್ಸೆ ಕೋವಿಡ್ ಸೋಂಕಿತರಿಗೆ ನೀಡಲಾಗುತ್ತಿದೆ ಎಂದು ಸಚಿವರು ಹೇಳಿದರು.

ಕೊರೋನ ಯೋಧರಿಗೆ ಸನ್ಮಾನ

ಕಾರ್ಯಕ್ರಮದಲ್ಲಿ ಕೊರೋನ ಯೋಧರಾಗಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಅದೇ ಸೋಂಕಿಗೆ ಒಳಗಾಗಿ, ಗುಣಮುಖರಾದ ಬಳಿಕ ಮತ್ತೆ ಕರ್ತವ್ಯಕ್ಕೆ ಹಾಜರಾಗಿ ಸೇವೆ ಸಲ್ಲಿಸುತ್ತಿರುವ ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ವಿವಿಧ ಇಲಾಖೆ, ಪೊಲೀಸ್ ಇಲಾಖೆ ಸಿಬ್ಬಂದಿ ಸೇರಿದಂತೆ 20 ಮಂದಿಯನ್ನು ಗೌರವಿಸಿ ಸನ್ಮಾನಿಸಲಾಯಿತು.

ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಪ್ರತಾಪ್ ಸಿಂಹ ನಾಯಕ್, ಮೇಯರ್ ದಿವಾಕರ ಪಾಂಡೇಶ್ವರ, ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ, ಪೊಲೀಸ್ ಆಯುಕ್ತ ಡಾ.ವಿಕಾಸ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News