ಅಡ್ಯಾರ್‌ನಲ್ಲಿ ನೂತನ ಅಂಗನವಾಡಿ ಕಟ್ಟಡ ಲೋಕಾರ್ಪಣೆ

Update: 2020-08-15 08:51 GMT

ಮಂಗಳೂರು, ಆ.15: ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕಲ್ಕಾರ್ ಅಂಗನವಾಡಿ ಕೇಂದ್ರ ಶನಿವಾರ ಲೋಕಾರ್ಪಣೆಗೊಂಡಿತು.

ಶಾಸಕ ಡಾ.ವೈ.ಭರತ್ ಶೆಟ್ಟಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಬಳಿಕ ಅಂಗನವಾಡಿ ಕಟ್ಟಡವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಅಂಗನವಾಡಿ ಕೇಂದ್ರಕ್ಕೆ ಸ್ಥಳದಾನ ಮಾಡಿದ ಮಾಧವ ನಾಯಕ್ ಅಡ್ಯಾರ್, ಪ್ರದೀಪ್ ಕುಮಾರ್ ಶೆಟ್ಟಿ, ಪುರುಷೋತ್ತಮ ಭಂಡಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೃಷ್ಣ ನಾಯಕ್, ಅಂಗನವಾಡಿ ಶಿಕ್ಷಕಿಯರು, ಶಿಶು ಅಭಿವೃದ್ಧಿ ಅಧಿಕಾರಿ ಹರೀಶ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News