Breaking News: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಎಂ.ಎಸ್. ಧೋನಿ

Update: 2020-08-15 14:58 GMT

ಹೊಸದಿಲ್ಲಿ: ಭಾರತ ಕ್ರಿಕೆಟ್ ತಂಡದ ಯಶಸ್ವಿ ನಾಯಕ ಎಂ.ಎಸ್. ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.

ಭಾರತದ ಮಾಜಿ ನಾಯಕ ಹಾಗೂ ಎರಡು ಬಾರಿಯ ವಿಶ್ವಕಪ್ ವಿಜೇತ ನಾಯಕ ಮಹೇಂದ್ರ ಸಿಂಗ್ ಧೋನಿ ಶನಿವಾರ ಇನ್‌ಸ್ಟಾಗ್ರಾಮ್ ಪೋಸ್ಟ್‌ನ ಮೂಲಕ ಅಂತರ್‌ರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ನಿರ್ಧಾರ ಪ್ರಕಟಿಸಿದ್ದಾರೆ.

 ‘‘ವೃತ್ತಿಜೀವನದುದ್ದಕ್ಕೂ ನಿಮ್ಮ ಅಪಾರ ಪ್ರೀತಿ ಹಾಗೂ ಬೆಂಬಲಕ್ಕೆ ಧನ್ಯವಾದಗಳು.  ರಾತ್ರಿ 7:29ರಿಂದ ನನ್ನನ್ನು ನಿವೃತ್ತ ಆಟಗಾರ ಎಂದು ಪರಿಗಣಿಸಿ’’ ಎಂದು ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಧೋನಿ ಬರೆದಿದ್ದಾರೆ.

 ಧೋನಿ ಯಾವ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿಯಾಗುತ್ತೇನೆಂದು ನಮೂದಿಸಿಲ್ಲ. ಧೋನಿ ಅವರು ಈ ವರ್ಷ ಯುಎಇನಲ್ಲಿ ನಡೆಯಲಿರುವ ಐಪಿಎಲ್‌ನಲ್ಲಿ ಆಡುವ ನಿರೀಕ್ಷೆಯಿದೆ. ಚೆನ್ನೈ ಸೂಪರ್ ಕಿಂಗ್ಸ್‌ನ ತರಬೇತಿ ಶಿಬಿರದಲ್ಲಿ ಭಾಗವಹಿಸಲು ಶುಕ್ರವಾರ ಚೆನ್ನೈ ನಗರಕ್ಕೆ ಆಗಮಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News