ಮಲ್ಪೆ ಫ್ಲವರ್ಸ್ ಆಫ್ ಪ್ಯಾರಡೈಸ್ ಸ್ವಾತಂತ್ರ್ಯ ದಿನಾಚರಣೆ
ಮಲ್ಪೆ, ಆ.15: ಮಲ್ಪೆ ಫ್ಲವರ್ಸ್ ಆಫ್ ಪ್ಯಾರಡೈಸ್ ಪಬ್ಲಿಕ್ ಶಾಲೆಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕೊರೋನ ಮಾರ್ಗ ಸೂಚಿಗಳನ್ನು ಪಾಲಿಸುವುದರೊಂದಿಗೆ ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ಸ್ವಾತಂತ್ರ್ಯ ಹೋರಾಟಗಾರ ಲಕ್ಷ್ಮೀ ನಾರಾಯಣ ಶರ್ಮ ಅವರ ಪುತ್ರ ಉಡುಪಿ ಜಿಲ್ಲಾ ಕೃಷಿ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ದ್ವಜಾರೋಹಣವನ್ನು ನೆರವೇರಿಸಿದರು. ಮೊಹಮ್ಮದ್ ಇರ್ಷಾದ್ ನೇಜಾರು ಹಾಗೂ ಮೊಹಮ್ಮದ್ ಅಶ್ರಫ್ ಬೆಂಗ್ರೆ ಮಾತನಾಡಿ ದರು.
ವಿದ್ಯಾರ್ಥಿಗಳು ಕನ್ನಡ, ಇಂಗ್ಲೀಷ್ ಮತ್ತು ಹಿಂದಿಯಲ್ಲಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ವಿದ್ಯಾರ್ಥಿಗಳು ದ್ವಜಗೀತೆ ಮತ್ತು ದೇಶ ಪ್ರೇಮದ ಗೀತೆಗಳನ್ನು ಹಾಡಿದರು. ಸ್ವಾತಂತ್ರ್ಯೋತ್ಸವದ ಪ್ರಯುಕ್ತ ನಡೆದ ಭಾಷಣ ಸ್ಪರ್ಧೆ ಮತ್ತು ಕ್ವಿಝ್ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಶಾಲಾ ಶೈಕ್ಷಣಿಕ ನಿರ್ದೇಶಕ ಯಾಸೀನ್ ಮಲ್ಪೆ ಸಮಾರೋಪ ಭಾಷಣ ಮಾಡಿದರು. ಶಾಲಾ ಮುಖ್ಯೋಪಾದ್ಯಾಯಿನಿ ಶ್ವೇತಾ ಪ್ರಶಾಂತ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಟ್ರಸ್ಟ್‌ನ ಅಧ್ಯಕ್ಷ ಎಫ್.ಎಂ.ಅಬ್ದುಲ್ ರಝಾಕ್ ಅತಿಥಿಗಳಿಗೆ ಸ್ಮರಣಿಕೆಯನ್ನು ನೀಡಿದರು.
ರಹ್ಮತುಲ್ಲಾ ನಕ್ವಾ, ಟ್ರಸ್ಟ್ನ ಕಾರ್ಯದರ್ಶಿ ಖತೀಬ್ ಅಲ್ತಾಫ್, ಕೋಶಾಧಿಕಾರಿ ಅಬ್ದುಲ್ ಸತ್ತಾರ್, ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಎಫ್.ಎಂ. ಸಾದಿಕ್ ಉಪಸ್ಥಿತರಿದ್ದರು. ಪ್ರಾರ್ಥಮಿಕ ಶಾಲಾ ಮುಖ್ಯೋಪಾದ್ಯಾ ಯಿನಿ ಸಹನ ಅನಿಲ್ ಸ್ವಾಗತಿಸಿದರು. ಶಿಕ್ಷಕಿ ತುಷಾರ ಪಾಲನ್ ವಂದಿಸಿದರು. ರೀನಾಝ್ ಕಾರ್ಯಕ್ರಮ ನಿರೂಪಿಸಿದರು.