×
Ad

ಕಾಂಗ್ರೆಸ್ ಸೇವಾದಳದಿಂದ ಸ್ವಾತಂತ್ರೋತ್ಸವ ಆಚರಣೆ

Update: 2020-08-15 20:55 IST

ಉಡುಪಿ, ಆ.15: ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದ ಮಹಾತ್ಮಾ ಗಾಂಧಿ ಅವರ ಹೋರಾಟದ ಉದ್ದೇಶ ಅರ್ಥಪೂರ್ಣವಾಗಬೇಕಾದರೆ ದೇಶವು ಸ್ವಾವಲಂಬನೆಯೊಂದಿಗೆ ಬಲಿಷ್ಠ ರಾಷ್ಟ್ರವಾಗಿ ಮುನ್ನಡೆಯಬೇಕಾಗಿದೆ ಎಂದು ಮಾಜಿ ಶಾಸಕ ಯು.ಆರ್. ಸಭಾಪತಿ ಹೇಳಿದ್ದಾರೆ.

ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ಇರುವ ರಾಕಿ ಫೆರ್ನಾಂಡಿಸ್ ಸ್ಮಾರಕ ಧ್ವಜಕಟ್ಟೆ (ಕ್ಲಾಕ್ ಟವರ್) ಬಳಿ ಜಿಲ್ಲಾ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಸೇವಾದಳ ಜಂಟಿಯಾಗಿ ಹಮ್ಮಿಕೊಂಡ 74ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಸಮಾರಂಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಎಂ.ಎ. ಗಫೂರ್, ದಿನೇಶ್ ಪುತ್ರನ್, ಬಿ. ನರಸಿಂಹ ಮೂರ್ತಿ, ಭಾಸ್ಕರ್ ರಾವ್ ಕಿದಿಯೂರು, ಹರೀಶ್ ಕಿಣಿ, ಶಬ್ಬೀರ್ ಅಹ್ಮದ್, ಪ್ರಖ್ಯಾತ್ ಶೆಟ್ಟಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಮಹಾಬಲ ಕುಂದರ್, ಉದ್ಯಾವರ ನಾಗೇಶ್ ಕುಮಾರ್, ಜ್ಯೋತಿ ಹೆಬ್ಬಾರ್, ಅಣ್ಣಯ್ಯ ಶೇರಿಗಾರ್, ಕೀರ್ತಿ ಶೆಟ್ಟಿ, ಹರೀಶ್ ಶೆಟ್ಟಿ ಪಾಂಗಾಳ, ವಿಶ್ವಾಸ್ ಅಮೀನ್, ಯತೀಶ್ ಕರ್ಕೇರಾ, ಗೀತಾ ವಾಗ್ಲೆ, ಸುರೇಶ್ ಶೆಟ್ಟಿ ಬನ್ನಂಜೆ, ಕೃಷ್ಣಮೂರ್ತಿ ಆಚಾರ್ಯ, ರಮೇಶ್ ಕಾಂಚನ್, ಜನಾರ್ದನ ಭಂಡಾರ್ಕಾರ್ ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News