ಉಡುಪಿ: ರೆಡ್‌ಕ್ರಾಸ್‌ನಿಂದ ಸ್ವಾತಂತ್ರ್ಯ ದಿನಾಚರಣೆ
Update: 2020-08-15 20:57 IST
ಉಡುಪಿ, ಆ.15: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ರೆಡ್ ಕ್ರಾಸ್ ಭವನದಲ್ಲಿ ಆಚರಿಸಲಾಯಿತು.
ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು. ಇದೇ ಸಂದರ್ಭ ದಲ್ಲಿ ರೆಡ್‌ಕ್ರಾಸ್ ಸಂಸ್ಥಾಪಕ ಸರ್ ಜೀನ್ ಹೆನ್ರಿ ಡ್ಯುನಾಂಟ್‌ರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಾಯಿತು. ಮುಖ್ಯ ಅತಿಥಿಗಳಾಗಿ ರೆಡ್‌ಕ್ರಾಸ್ ಆಡಳಿತ ಮಂಡಳಿ ಸದಸ್ಯ ಡಾ.ಕೆ.ಕೆ. ಕಲ್ಕೂರ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಹಾಗೂ ಇತರರು ಭಾಗವಹಿಸಿದ್ದರು.