ಯೋಧರಿಂದ ಸ್ವಾತಂತ್ರದ ರಕ್ಷಣೆ: ಉಡುಪಿ ಜಿಲ್ಲಾಧಿಕಾರಿ

Update: 2020-08-15 15:37 GMT

ಉಡುಪಿ, ಆ.15: ಹಲವು ಮಂದಿ ಮಹನೀಯರ ತ್ಯಾಗ ಬಲಿದಾನದಿಂದ ದೇಶಕ್ಕೆ ದೊರೆತಿರುವ ಸ್ವಾತಂತ್ರವನ್ನು ಪ್ರಸ್ತುತ ನಮ್ಮ ಸೇನಾಪಡೆಗಳ ವೀರ ಯೋಧರು ರಕ್ಷಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

ಶನಿವಾರ ದೇಶದ ಸ್ವಾತಂತ್ರ ದಿನಾಚರಣೆ ಪ್ರಯುಕ್ತ ಅಜ್ಜರಕಾಡಿನ ಹುತಾತ್ಮರ ಸ್ಮಾರಕಕ್ಕೆ ಗೌರವ ಸಲ್ಲಿಸಿ ಅವರು ಮಾತನಾಡುತಿದ್ದರು. ಅಧಿಕಾರಿಗಳು ಮತ್ತು ಯೋಧರು ದೇಶದ ಅಭಿವೃಧ್ದಿಗಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ನಿವೃತ್ತ ಯೋಧರು ಜಿಲ್ಲೆಯ ಅಭಿವೃಧಿಗೆ ಪೂರಕವಾದ ಸಲಹೆ ಸೂಚನೆಗಳನ್ನು ನೀಡುವ ಮೂಲಕ ಅಭಿವೃಧ್ದಿಗೆ ಜಿಲ್ಲಾಡಳಿತದೊಂದಿಗೆ ಕೈ ಜೋಡಿಸುವಂತೆ ಅವರು ಮನವಿ ಮಾಡಿದರು.

 ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಹಾಗೂ ಜಿಲ್ಲೆಯ ನಿವೃತ್ತ ಯೋಧರು ಉಪಸ್ಥಿತರಿದ್ದರು.
  
ಅಲ್ಲಲ್ಲಿ ಸ್ವಾತಂತ್ರೋತ್ಸವ ಆಚರಣೆ

*ಉಡುಪಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನಡೆದ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ವಾರ್ತಾಧಿಕಾರಿ ಬಿ. ಮಂಜುನಾಥ್ ಧ್ವಜಾರೋಹಣ ನೆರವೇರಿಸಿದರು. ಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

*ಅಜ್ಜರಕಾಡು ಲೋಕೋಪಯೋಗಿ ವಸತಿಗೃಹದ ಆವರಣದಲ್ಲಿ ನಡೆದ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ, ಲೋಕೋಪಯೋಗಿ ಇಲಾಖೆ ಕಾರ್ಯ ನಿರ್ವಾಹಕ ಇಂಜಿನಿಯರ್ ಅಶೋಕ್ ಧ್ವಜಾರೋಹಣ ನೆರವೇರಿಸಿದರು. ವಸತಿಗೃಹದ ನಿವಾಸಿಗಳು ಉಪಸ್ಥಿತರಿದ್ದರು.

*ಉಡುಪಿ ಪುರುಷೋತ್ತಮ ನಗರದ ಓಂ ವಿಹಾರ ವಸತಿ ಸಮುಚ್ಚಯದಲ್ಲಿ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು. ಸಿಂಡಿಕೇಟ್ ಬ್ಯಾಂಕ್‌ನ ನಿವೃತ್ತ ಮ್ಯಾನೇಜರ್ ಸಿ.ಕೆ.ಪೈ ಧ್ವಜಾರೋಹಣ ನೆರವೇರಿಸಿದರು.ಗೈದರು. ಸುಧೀರ್ ಕೊಡವೂರು ಕಾರ್ಯಕ್ರಮ ನಿರೂಪಿಸಿದರು. ವಸತಿ ಸಮುಚ್ಚಯದ ಸರ್ವರೂ ಉಪಸ್ಥಿತರಿದ್ದರು.

*ಮಣಿಪಾಲದ ಮಾಧವಕೃಪಾ ಶಾಲೆಯಲ್ಲಿ 74ನೇ ಸ್ವಾತಂತ್ರ ದಿನಾಚರಣೆ ಯನ್ನು ಆಚರಿಸಲಾಯಿತು. ಶಾಲೆಯ ಸಂಚಾಲಕ ಪಿ.ಜಿ.ಪಂಡಿತ್ ಧ್ವಜಾ ರೋಹಣಗೈದರು. ಪ್ರಾಂಶುಪಾಲೆ ಜೆಸ್ಸಿ ಆಂಡ್ರೂವ್ಸ್, ಉಪ ಪ್ರಾಂಶುಪಾಲೆ ಜ್ಯೋತಿ ಸಂತೋಷ್, ಶಕೀಲಾಕ್ಷಿ ಕೃಷ್ಣ, ಮುಖ್ಯೋ ಪಾಧ್ಯಾಯಿನಿ ಆಶಾ ನಾಯಕ್ ಮತ್ತು ಶಿಕ್ಷಕರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News