ಕೋಡಿಜಾಲ್: 74ನೇ ಸ್ವಾತಂತ್ರೋತ್ಸವ ಆಚರಣೆ

Update: 2020-08-16 05:35 GMT

ಕೊಣಾಜೆ, ಆ.15: ಕೋಡಿಜಾಲ್ ರಿಫಾಯಿ ಜುಮಾ ಮಸ್ಜಿದ್, ಖಿದ್ಮತುಲ್ ಇಸ್ಲಾಂ ಅಸೋಸಿಯೇಷನ್ ಕೋಡಿಜಾಲ್ ಹಾಗೂ ಜಿಸಿಸಿ ಘಟಕ, ಹಯಾತುಲ್ ಇಸ್ಲಾಂ ಮದ್ರಸ ಕೋಡಿಜಾಲ್ ಇದರ ಆಶ್ರಯದಲ್ಲಿ ಮಸೀದಿ ಆವರಣದಲ್ಲಿ 74ನೆ ಸ್ವಾತಂತ್ರ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಸೀದಿಯ ಅಧ್ಯಕ್ಷ  ಹಾಜಿ ಇಬ್ರಾಹೀಂ ಕೋಡಿಜಾಲ್ ಧ್ವಜಾರೋಹಣಗೈದು ಸ್ವಾತಂತ್ರ ದಿನಾಚರಣೆಯ ಸಂದೇಶ ನೀಡಿದರು.

ಮಸೀದಿಯ ಖತೀಬ್ ಅಲ್ಹಾಜ್ ಅಬೂಬಕರ್ ಸಖಾಫಿ ದುವಾ ನೆರವೇರಿಸಿದರು, ಕೊಣಾಜೆ ಗ್ರಾ.ಪಂ. ಮಾಜಿ ಅಧ್ಯಕ್ಷ ಅಚ್ಯುತ ಗಟ್ಟಿ, ಸ್ವಾತಂತ್ರ ದಿನಾಚರಣೆಯ ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಮಸೀದಿಯ ಪ್ರಧಾನ ಕಾರ್ಯದರ್ಶಿ ಹಾಜಿ ಅಬೂಬಕರ್, ಉಪಾಧ್ಯಕ್ಷರಾದ  ಹಾಜಿ ಮುಹಮ್ಮದ್ , ಮುಹಝ್ಝಿನ್ ಇಬ್ರಾಹೀಂ ಎಚ್.ಎಂ.,  ಇಸ್ಲಾಂ ಅಸೋಸಿಯೇಷನ್‌ನ ಅಧ್ಯಕ್ಷ ಅಮೀರ್ ಮತ್ತಿತರರು ಉಪಸ್ಥಿತರಿದ್ದರು. 

ಮಸೀದಿಯ ಕಾರ್ಯದರ್ಶಿ ರಹ್ಮಾನ್ ಕೆ.ಎಸ್. ಸ್ವಾಗತಿಸಿದರು. ಸಮಿತಿಯ ಗೌರವಾಧ್ಯಕ್ಷ ಅಬ್ದುಲ್ ರಹ್ಮಾನ್ ಎಕೆ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News