ಗಲಾಟೆ ಪ್ರದೇಶಗಳಲ್ಲಿ ಪರಿಸ್ಥಿತಿ ಸಂಪೂರ್ಣ ಶಾಂತ: ಪೂರ್ವ ವಿಭಾಗದ ಡಿಸಿಪಿ ಶರಣಪ್ಪ

Update: 2020-08-15 17:04 GMT

ಬೆಂಗಳೂರು, ಆ.15: ಇಲ್ಲಿನ ಕೆಜಿಹಳ್ಳಿ, ಡಿಜೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿನ ಗಲಾಟೆ ಪ್ರದೇಶಗಳಲ್ಲಿ ಪರಿಸ್ಥಿತಿ ಸಂಪೂರ್ಣ ಶಾಂತಿಯುತವಾಗಿದೆ ಎಂದು ಪೂರ್ವ ವಿಭಾಗದ ಡಿಸಿಪಿ ಡಾ.ಶರಣಪ್ಪ ಹೇಳಿದರು.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಎರಡೂ ಪೊಲೀಸ್ ಠಾಣೆಗಳ ವ್ಯಾಪ್ತಿಗಳಲ್ಲಿ ನಾಳೆ ಬೆಳಗ್ಗೆ 6 ಗಂಟೆವರೆಗೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಪ್ರದೇಶಗಳಲ್ಲಿ ಸ್ಥಳೀಯ ಪೊಲೀಸರ ಜೊತೆಗೆ ಸಿಎಆರ್, ಕೆಎಸ್‍ಆರ್ಪಿ ತುಕಡಿಗಳು ಅಲ್ಲದೆ ಮೂರು ಕಂಪೆನಿ ಅರೆಸೇನಾ ಪಡೆಗಳನ್ನು ಬಂದೋಬಸ್ತ್ ಗಾಗಿ ನಿಯೋಜಿಸಲಾಗಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News