ಜಮ್ಮುಕಾಶ್ಮೀರ: ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದ ಬಳಿಕ ಮೊಬೈಲ್ ಇಂಟರ್‌ನೆಟ್ ಸೇವೆ ಮರು ಸ್ಥಾಪನೆ

Update: 2020-08-15 17:29 GMT

ಶ್ರೀನಗರ, ಆ. 15: ಸ್ವಾತಂತ್ರ ದಿನಾಚರಣೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕಾಶ್ಮೀರ ಕಣಿವೆಯಲ್ಲಿ ಶನಿವಾರ ಗಂಟೆಗಳ ಕಾಲ ರದ್ದುಗೊಳಿಸಿದ ಕಡಿಮೆ ವೇಗದ ಮೊಬೈಲ್ ಇಂಟರ್‌ನೆಟ್ ಸೇವೆಯನ್ನು ಮರು ಸ್ಥಾಪಿಸಲಾಗಿದೆ.

ಕಣಿವೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಣೆಯ ಹಿನ್ನೆಲೆಯಲ್ಲಿ ಕಠಿಣ ಭದ್ರತಾ ವ್ಯವಸ್ಥೆ ಏರ್ಪಡಿಸುವುದರೊಂದಿಗೆ ಇಂದು ಬೆಳಗ್ಗೆ ಮೊಬೈಲ್ ಇಂಟರ್‌ನೆಟ್ ಸೇವೆ ರದ್ದುಗೊಳಿಸಲಾಗಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಶ್ರೀನಗರದ ಶೇರ್ ಎ ಕಾಶ್ಮೀರ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಅಧಿಕೃತ ಕಾರ್ಯಕ್ರಮ ಮುಗಿದ ಬಳಿಕ ಇಂಟರ್‌ನೆಟ್ ಸೇವೆ ಮರು ಸ್ಥಾಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಜಮ್ಮು ಹಾಗೂ ಕಾಶ್ಮೀರದಲ್ಲಿ ಕಳೆದ ಒಂದು ವರ್ಷಕ್ಕಿಂತಲೂ ಅಧಿಕ ಕಾಲ ತೀವ್ರ ವೇಗದ 4ಜಿ ಇಂಟರ್‌ನೆಟ್ ಸೇವೆ ರದ್ದುಗೊಳಿಸಲಾಗಿದೆ. ಜಮ್ಮು ಹಾಗೂ ಕಾಶ್ಮೀರದ ವಿವಿಧ ಭಾಗಗಳಲ್ಲಿ ಭದ್ರತೆ ಏರ್ಪಡಿಸುವ ಭಾಗವಾಗಿ ಕಡಿಮೆ ವೇಗದ ಮೊಬೈಲ್ ಇಂಟರ್‌ನೆಟ್ ಸೇವೆಯನ್ನು ರದ್ದುಗೊಳಿಸುವುದು 2005ರಿಂದ ವಾಡಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News