×
Ad

ಗೋಶಾಲೆಗಳಿಗೆ 200ಕೋಟಿ ರೂ. ಪ್ಯಾಕೇಜ್‌ಗೆ ಆಗ್ರಹ: ಪೇಜಾವರ ಸ್ವಾಮೀಜಿಯಿಂದ ಕೇಂದ್ರ ಸರಕಾರಕ್ಕೆ ಪತ್ರ

Update: 2020-08-16 18:00 IST

ಉಡುಪಿ, ಆ.16: ಕೊರೊನಾ ವಿಪತ್ತಿನಿಂದ ದೇಶದ ನೂರಾರು ಗೋಶಾಲೆ ಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದು ತುರ್ತಾಗಿ ಕನಿಷ್ಠ 200 ಕೋಟಿ ರೂ.ಗಳ ನಿರ್ವಹಣಾ ನಿಧಿಯನ್ನು ನೀಡುವಂತೆ ಒತ್ತಾಯಿಸಿ ಉಡುಪಿ ಗೋವರ್ಧನ ಗಿರಿ ಟ್ರಸ್ಟ್ ಅಧ್ಯಕ್ಷರಾಗಿರುವ ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಕೇಂದ್ರ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್‌ಗೆ ಪತ್ರ ಬರೆದಿದ್ದಾರೆ.

ಕಳೆದ ಆರೇಳು ತಿಂಗಳುಗಳಿಂದ ಕೊರೋನಾದಿಂದ ವಿವಿಧ ಕ್ಷೇತ್ರಗಳು ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವಂತೆಯೇ ದೇಶದ ಗೋಶಾಲೆ ಗಳೂ ತೊಂದರೆಗೊಳಗಾಗಿವೆ. ಗೋಶಾಲೆಗಳ ನಿರ್ವಹಣೆ ಅತ್ಯಂತ ವೆಚ್ಚದಾ ಯಕವಾಗಿದೆ. ಉಡುಪಿಯಲ್ಲಿ ನೀಲಾವರ, ಕೊಡವೂರು, ಹೆಬ್ರಿಯಲ್ಲಿ ನಡೆಸು ತ್ತಿರುವ ಗೋಶಾಲೆಗಳಿಗೆ ಮಾಸಿಕ ಅಂದಾಜು 35ಲಕ್ಷ ರೂ. ನಿರ್ವಹಣಾ ವೆಚ್ಚ ಇದೆ. ಅದೇ ರೀತಿಯಲ್ಲಿ ಇದಕ್ಕೂ ದೊಡ್ಡ ಅಥವಾ ಸಣ್ಣ ಮಟ್ಟದ ಗೋಶಾಲೆ ಗಳನ್ನು ಅನೇಕ ಮಠ, ದೇವಳ ಹಾಗೂ ಮಹನೀಯರು ನಡೆಸುತ್ತಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಈವರೆಗೆ ಗೋಶಾಲೆಗಳ ನಿರ್ವಹಣೆ ಧರ್ಮಾಭಿಮಾನಿಗಳ ಸಹಕಾರದಿಂದ ಸಾಧ್ಯವಾಗುತ್ತಿತ್ತು. ಆದರೆ ಪ್ರಸ್ತುತ ಭಕ್ತರ ದೇಣಿಗೆಯೂ ಅಷ್ಟಾಗಿ ಬರುತ್ತಿಲ್ಲ. ಎರಡು ತಿಂಗಳಿನಿಂದ ದೇಶದ ಕೆಲವೆಡೆಗಳಲ್ಲಿ ವಿಪರೀತ ಮಳೆಯೂ ಸುರಿಯು ತ್ತಿರುವುದರಿಂದ ಮೇವಿನ ಸಂಗ್ರಹಣೆಯೂ ದುಸ್ತರವಾಗುತ್ತಿದೆ. ಆದ್ದರಿಂದ ಕೊರೊನಾ ವಿಪತ್ತನ್ನು ಎದುರಿಸಲು ಬೇರೆ ಬೇರೆ ಕ್ಷೇತ್ರಗಳಿಗೆ ಸರಕಾರವು ಆರ್ಥಿಕ ಪ್ಯಾಕೇಜ್ ಘೋಷಿಸಿದಂತೆ ಗೋಶಾಲೆಗಳಿಗೂ ಕನಿಷ್ಠ 200 ಕೋಟಿ ರೂ. ತುರ್ತಾಗಿ ನೀಡಿಬೇಕು. ಕೇವಲ ಧರ್ಮಮಾತ್ರವಲ್ಲದೇ ಆರ್ಥಿಕತೆಯ ಹಿತದೃಷ್ಟಿ ಯಿಂದಲೂ ಗೋರಕ್ಷಣೆಯನ್ನು ಆದ್ಯತೆಯಾಗಿ ಪರಿಗಣಿಸಬೇಕೆಂದು ಪೇಜಾವರ ಸ್ವಾಮೀಜಿ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News