×
Ad

ಉಡುಪಿ ಜಿಲ್ಲೆಯ 237 ಮಂದಿಯಲ್ಲಿ ಕೊರೋನ ಪಾಸಿಟಿವ್

Update: 2020-08-16 18:13 IST

ಉಡುಪಿ, ಆ.16: ಜಿಲ್ಲೆಯಲ್ಲಿ 237 ಮಂದಿಯಲ್ಲಿ ರವಿವಾರ ಕೋವಿಡ್- 19 ಪಾಸಿಟಿವ್ ದೃಢಪಟ್ಟಿದೆ. ಇದರಿಂದ ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಒಟ್ಟು ಸಂಖ್ಯೆ ಎಂಟು ಸಾವಿರದ ಅಂಚಿಗೆ ಅಂದರೆ 7975ನ್ನು ತಲುಪಿದೆ. ಇಂದು ದಿನದಲ್ಲಿ 523 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ನೆಗೆಟಿವ್ ಫಲಿತಾಂಶ ನೀಡಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

ರವಿವಾರ ಕೊರೋನ ಸೋಂಕು ಪತ್ತೆಯಾದ 237 ಮಂದಿಯಲ್ಲಿ ಉಡುಪಿ ತಾಲೂಕಿನ 122 ಮಂದಿ, ಕುಂದಾಪುರ ತಾಲೂಕಿನ 100 ಹಾಗೂ ಕಾರ್ಕಳ ತಾಲೂಕಿನ 14 ಮಂದಿ ಸೇರಿದ್ದಾರೆ. ಉಳಿದಂತೆ ಹೊರಜಿಲ್ಲೆಯ ಒಬ್ಬರು ಚಿಕಿತ್ಸೆಗೆ ಇಲ್ಲಿಗೆ ಬಂದು ಪಾಸಿಟಿವ್ ಆಗಿದ್ದಾರೆ. ಮಕ್ಕಳು ಸೇರಿದಂತೆ 124 ಮಂದಿ ಪುರುಷರು ಹಾಗೂ 113 ಮಂದಿ ಮಹಿಳೆಯರಲ್ಲಿ ಸೋಂಕು ಕಂಡು ಬಂದಿದೆ. ಇವರಲ್ಲಿ 87 ಪುರುಷರು ಹಾಗೂ 83 ಮಹಿಳೆಯರಲ್ಲಿ ರೋಗದ ಲಕ್ಷಣಗಳು ಕಂಡುಬಂದಿಲ್ಲ ಎಂದು ಡಾ.ಸೂಡ ತಿಳಿಸಿದರು.

ಇಂದು ಕೊರೋನ ಪಾಸಿಟಿವ್ ದೃಢಗೊಂಡ 237 ಮಂದಿಯಲ್ಲಿ 107 ಮಂದಿ ಪಾಸಿಟಿವ್ ಬಂದವರ ಸಂಪರ್ಕದಿಂದ, 45 ಮಂದಿ ಶೀತಜ್ವರ ದಿಂದ, ಒಬ್ಬರು ಉಸಿರಾಟ ತೊಂದರೆಯಿಂದ ಬಳಲುತಿದ್ದು ಸೋಂಕು ಕಾಣಿಸಿಕೊಂಡಿದೆ. ಉಳಿದಂತೆ 84 ಮಂದಿಯ ಸೋಂಕಿನ ಸಂಪರ್ಕ ಇನ್ನೂ ಪತ್ತೆಯಾಗಬೇಕಿದೆ ಎಂದರು.

260 ಮಂದಿ ಬಿಡುಗಡೆ: ಜಿಲ್ಲೆಯಲ್ಲಿ ರವಿವಾರ 260 ಮಂದಿ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇವರಲ್ಲಿ 106 ಮಂದಿ ಕೋವಿಡ್ ಆಸ್ಪತ್ರೆಗಳಿಂದ, 154 ಮಂದಿ ಹೋಮ್ ಐಸೋಲೇಷನ್ ನಲ್ಲಿದ್ದು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾದವರ ಸಂಖ್ಯೆ 5361ಕ್ಕೇರಿದೆ. ಈಗಾಗಲೇ ಪಾಸಿಟಿವ್ ಬಂದ 2537 ಮಂದಿ ಚಿಕಿತ್ಸೆಯಲ್ಲಿದ್ದು, ಇವರಲ್ಲಿ 1398 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಹಾಗೂ 1139 ಮಂದಿ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆುುತಿದ್ದಾರೆ ಎಂದು ಡಿಎಚ್‌ಓ ಹೇಳಿದರು.

569 ಸ್ಯಾಂಪಲ್ ಸಂಗ್ರಹ: ಸೋಂಕಿನ ಪರೀಕ್ಷೆಗಾಗಿ ರವಿವಾರ 569 ಮಂದಿಯ ಗಂಟಲುದ್ರವದ ಸ್ಯಾಂಪಲ್‌ಗಳನ್ನು ಪಡೆಯಲಾಗಿದೆ. ಇದರಲ್ಲಿ ಕೋವಿಡ್ ಶಂಕಿತರು 391 ಮಂದಿ, ಕೋವಿಡ್ ಸಂಪರ್ಕಿತರು 97 ಮಂದಿ ಇದ್ದರೆ, ಉಸಿರಾಟ ತೊಂದರೆಯ ಎಂಟು ಮಂದಿ, ಶೀತಜ್ವರದಿಂದ ಬಳಲುವ 27 ಮಂದಿ ಹಾಗೂ ವಿವಿಧ ಕೋವಿಡ್ ಹಾಟ್‌ಸ್ಪಾಟ್‌ಗಳಿಂದ ಆಗಮಿಸಿದ 46 ಮಂದಿಯ ಸ್ಯಾಂಪಲ್‌ಗಳು ಸೇರಿವೆ ಎಂದು ಡಾ.ಸೂಡ ತಿಳಿಸಿದರು.

ರವಿವಾರ ಪಡೆದ 569 ಸ್ಯಾಂಪಲ್‌ಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಸಂಗ್ರಹಿಸಿದ ಮಾದರಿಗಳ ಒಟ್ಟು ಸಂಖ್ಯೆ 55,363ಕ್ಕೇರಿದೆ. ಇವುಗಳಲ್ಲಿ ಈವರೆಗೆ 46,104 ನೆಗೆಟಿವ್, 7975 ಪಾಸಿಟಿವ್ ಬಂದಿವೆ. ಜಿಲ್ಲೆಯಲ್ಲಿ ಈವರೆಗೆ 79 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಇನ್ನು ಒಟ್ಟು 1284 ಸ್ಯಾಂಪಲ್‌ಗಳ ಪರೀಕ್ಷಾ ವರದಿ ಬರಬೇಕಿದೆ ಎಂದು ಡಾ.ಸೂಡ ವಿವರಿಸಿದರು.

ಜಿಲ್ಲೆಯಲ್ಲಿ ಶುಕ್ರವಾರ 237 ಮಂದಿಯನ್ನು ಆಸ್ಪತ್ರೆಗಳ ಐಸೋಲೇಷನ್ ವಾರ್ಡ್‌ಗೆ ದಾಖಲಿಸಲಾಗಿದೆ.ಇವರಲ್ಲಿ ಒಟ್ಟು 121 ಮಂದಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಹಾಗೂ 116 ಮಂದಿ ಹೋಮ್ ಐಸೋಲೇಷನ್‌ನಲ್ಲಿ ಇದ್ದಾರೆ. ಜಿಲ್ಲೆಯಲ್ಲಿ ಈಗ ಒಟ್ಟು 2469 ಮಂದಿ ಹೋಮ್ ಐಸೋಲೇಷನ್ ಚಿಕಿತ್ಸೆಯಲ್ಲಿದ್ದಾರೆ ಎಂದು ಅವರು ಹೇಳಿದರು.

ದಿನದಲ್ಲಿ ಕೋವಿಡ್‌ಗೆ ಇಬ್ಬರ ಸಾವು

ಉಡುಪಿ ಜಿಲ್ಲೆಯಲ್ಲಿ ರವಿವಾರ ಇಬ್ಬರು ಕೋವಿಡ್-19ರ ಸೋಂಕಿನೊಂದಿಗೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇಂದು ಮೃತಪಟ್ಟ ಇಬ್ಬರು ಮಹಿಳೆಯರೂ ಮಣಿಪಾಲ ಕೆಎಂಸಿಯಲ್ಲಿ ಚಿಕಿತ್ಸೆ ಪಡೆಯುತಿದ್ದು, ಪರೀಕ್ಷೆಯ ವೇಳೆ ಪಾಸಿಟಿವ್ ಕಂಡುಬಂದವರಾಗಿದ್ದಾರೆ.

ಬ್ರಹ್ಮಾವರ ಹಾರಾಡಿಯ 82ರ ಹರೆಯದ ಮಹಿಳೆ ಕ್ಯಾನ್ಸರ್‌ಗೆ ಚಿಕಿತ್ಸೆಯಲ್ಲಿ ದ್ದರು. ಇನ್ನೊಬ್ಬರು 56ವರ್ಷದವರಾಗಿದ್ದು ಹೆಬ್ರಿ ಸಮೀಪದ ಸೀತಾನದಿ ಯವರು. ಇವರು ಹಲವು ಸಮಸ್ಯೆಗಳಿಗೆ ಕಳೆದ ಕೆಲದಿನಗಳಿಂದ ಚಿಕಿತೆ್ಸ ಪಡೆಯುತಿದ್ದರೆಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News