×
Ad

ಆ.18ರಿಂದ ಮಂಗಳೂರು ಪ್ರೆಸ್‌ಕ್ಲಬ್ ಪತ್ರಿಕಾಗೋಷ್ಠಿ ಆರಂಭ

Update: 2020-08-16 22:09 IST

ಮಂಗಳೂರು, ಆ.16: ಲಾಕ್‌ಡೌನ್ ಹಿನ್ನೆಲೆ ಮತ್ತು ಕೊರೋನ ಪ್ರಕರಣಗಳ ಹೆಚ್ಚಳದಿಂದ ಕಳೆದ ತಿಂಗಳು ಸ್ಥಗಿತಗೊಳಿಸಲಾಗಿದ್ದ ಮಂಗಳೂರು ಪ್ರೆಸ್‌ನ ಪತ್ರಿಕಾ ಭವನದಲ್ಲಿ ನಡೆಯುವ ಪತ್ರಿಕಾಗೋಷ್ಠಿಗಳನ್ನು ಆ.18ರಿಂದ ಮತ್ತೆ ಆರಂಭಿಸಲಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ. ಸೋಂಕಿತರ ಸಾವಿನ ಸಂಖ್ಯೆ ಕೂಡ ಕಡಿಮೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಸರಕಾರದ ನಿಯಮದಂತೆ ಸುರಕ್ಷಿತ ಅಂತರ ಕಾಪಾಡಿಕೊಂಡು, ಸ್ಯಾನಿಟೈಸರ್ ಬಳಸಿಕೊಂಡು ಪತ್ರಿಕಾಗೋಷ್ಠಿ ನಡೆಸಲಾಗುತ್ತದೆ. ಎಲ್ಲ ಪತ್ರಕರ್ತರು ಹಾಗೂ ಪತ್ರಿಕಾಗೋಷ್ಠಿ ನಡೆಸುವವರೂ ಮಾಸ್ಕ್ ಧರಿಸಿ, ಸೋಂಕಿಗೆ ತುತ್ತಾಗದಂತೆ ಸುರಕ್ಷಾ ಕ್ರಮ ಕೈಗೊಳ್ಳಗಬಹುದಾಗಿದೆ ಎಂದು ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ಪಡುಬಿದ್ರಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News