×
Ad

ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಲಿ: ಮಲ್ಲಿಕಾರ್ಜುನ ಖರ್ಗೆ

Update: 2020-08-16 22:10 IST

ಬೆಂಗಳೂರು, ಆ.16: ಕಾವಲ್‍ಭೈರಸಂದ್ರ ಗಲಾಟೆ ಪ್ರಕರಣ ಸಂಬಂಧ ಹೈಕೋರ್ಟಿನ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಬೇಕು ಎಂದು ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದರು.

ರವಿವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಲಾಟೆ ಪ್ರಕರಣ ಸಂಬಂಧ ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಮಿತಿಯೊಂದನ್ನು ರಚನೆ ಮಾಡಲಾಗಿದ್ದು, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಬಳಿಯೂ ಮಾಹಿತಿ ಪಡೆದಿದ್ದೇನೆ. ಸಮಿತಿಯ ವರದಿ ಬಂದ ನಂತರ, ಈ ಬಗ್ಗೆ ಹೆಚ್ಚಾಗಿ ಮಾತನಾಡುತ್ತೇನೆ ಎಂದರು.

ಒಬ್ಬ ಶಾಸಕನ ಮೇಲೆ ದಾಳಿ ನಡೆದಿದೆ, ಹೀಗಾಗಿ, ಸರಕಾರ ಈ ಕೂಡಲೇ ಶಾಸಕರಿಗೆ ರಕ್ಷಣೆ ನೀಡಬೇಕು ಎಂದು ಅವರು ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News