ಪಿಎಫ್‍ಐ, ಎಸ್‍ಡಿಪಿಐ ನಿಷೇಧದ ಬಗ್ಗೆ ಆ.20ರ ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಆನಂದ್ ಸಿಂಗ್

Update: 2020-08-16 18:50 GMT

ದಾವಣಗೆರೆ: ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಪೀಠಕ್ಕೆ ಆರಣ್ಯ ಸಚಿವ ಆನಂದ್ ಸಿಂಗ್ ಭೇಟಿ ನೀಡಿ ಪೀಠದ ಶ್ರೀ ಪ್ರಸನ್ನಾಂದ ಸ್ವಾಮಿಗಳಿಂದ ಆಶೀರ್ವಾದ ಪಡೆದರು. 

ಈ ವೇಳೆ ಪರಿಸರ ದಿನದ ಸವಿನೆನಪಿಗಾಗಿ ಪೀಠದ ಆವರಣದಲ್ಲಿ ಸಸಿಗಳನ್ನು ನೆಟ್ಟರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಬಿ.ಪಿ.ಹರೀಶ್, ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ತಹಶೀಲ್ದಾರ ರಾಮಚಂದ್ರಪ್ಪ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರು ಇದ್ದರು.
  
ಸಂಪುಟ ಪುನರಚನೆ ಸಿಎಂ ತೀರ್ಮಾನ 
ಬಳಿಕ ಮಾತನಾಡಿದ ಅವರು, ಯಾರು ಚೆನ್ನಾಗಿ ಕೆಲಸ ಮಾಡಿದ್ದಾರೆ, ಯಾರು ಮಾಡಿಲ್ಲ ಎಂದು ಮಾರ್ಕ್ ಕೊಡುವವರು ಮುಖ್ಯಮಂತ್ರಿಗಳು. ಅವರೇ ಸಚಿವ ಸಂಪುಟ ಪುನಾರಚನೆ ಬಗ್ಗೆ ತೀರ್ಮಾನ ಮಾಡುತ್ತಾರೆ. ನಾನು ಯಾವುದೇ ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ ಎಂದರು. 

ಬೆಂಗಳೂರಿನಲ್ಲಿ ನಡೆದ ಗಲಭೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಯಾವ ಶಾಸಕರಿಗೂ ಈ  ರೀತಿ ಆಗಬಾರದು. ಪ್ರಕರಣ ಇನ್ನೂ ತನಿಖಾ ಹಂತದಲ್ಲಿದೆ. ತನಿಖೆ ನಂತರ ಸತ್ಯಾಸತ್ಯತೆ ತಿಳಿಯಲಿದೆ ಎಂದು ಹೇಳಿದರು. 

ಆ.20 ರಂದು ನಿರ್ಧಾರ 
ಇದೇ ಆ.20ರಂದು ಸಂಪುಟ ಸಭೆ ನಡೆಯಲಿದ್ದು, ಆ ವೇಳೆ ಪಿಎಫ್‍ಐ, ಎಸ್‍ಡಿಪಿಐ ನಿಷೇಧ ಕುರಿತು ಸಭೆಯಲ್ಲಿ ತೀರ್ಮಾನವಾಗುತ್ತದೆ. ಅರಣ್ಯ ಇಲಾಖೆ ಭೂಮಿಯಲ್ಲಿ ಕೃಷಿ ನಡೆಸುತ್ತಿರುವ ರೈತರಿಗೆ ಸಾಗುವಳಿ ಪತ್ರ ನೀಡಿಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ನಲ್ಲಿದೆ. ಇನ್ನು ನಾಲ್ಕು ತಿಂಗಳ ನಂತರ ಇತ್ಯರ್ಥವಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು. 

ಇಲ್ಲಿಂದಲೇ ರಾಜಕೀಯ ಜೀವನ ಆರಂಭ 
2006 ರಿಂದ ನನ್ನ ರಾಜಕೀಯ ಜೀವನ ಆರಂಭವಾಗಿದ್ದು ವಾಲ್ಮೀಕಿ ಪೀಠದಿಂದಲೇ. ಆದ್ದರಿಂದ ಈ ಪೀಠದೊಂದಿಗೆ ಅವಿನಾಭಾವ ಸಂಬಂಧವಿದೆ. ಈ ಹಿನ್ನಲೆಯಲ್ಲಿ ಶ್ರೀಗಳ ಆಶೀರ್ವಾದ ಪಡೆಯಲು ಇಲ್ಲಿಗೆ ಬಂದಿದ್ದೇನೆ. ನನ್ನ ಕ್ಷೇತ್ರದಲ್ಲಿ ದೊಡ್ಡ ಸಂಖ್ಯೆಯಲ್ಲಿದ್ದು ನನ್ನನ್ನು ಬೆಂಬಲಿಸುತ್ತಾ ಬಂದಿದೆ ಎಂದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News