ಫೇಸ್‌ಬುಕ್ ಪಕ್ಷಪಾತ ವಿರುದ್ಧ ಜಂಟಿ ಸಂಸದೀಯ ಸಮಿತಿಯಿಂದ ತನಿಖೆಗೆ ರಾಹುಲ್ ಆಗ್ರಹ

Update: 2020-08-17 04:00 GMT

ಹೊಸದಿಲ್ಲಿ, ಆ.17: ದೇಶದಲ್ಲಿ ಫೇಸ್‌ಬುಕ್ ಹಾಗೂ ವಾಟ್ಸ್ ಆ್ಯಪ್‌ಗಳನ್ನು ಬಿಜೆಪಿ ಹಾಗೂ ಆರೆಸ್ಸೆಸ್ ನಿಯಂತ್ರಿಸುತ್ತಿದ್ದು, ಫೇಸ್‌ಬುಕ್‌ನ ಪಕ್ಷಪಾತ ಧೋರಣೆ ವಿರುದ್ಧ ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ‌ಗಾಂಧಿ ಒತ್ತಾಯಿಸಿದ್ದಾರೆ.

ಫೇಸ್‌ಬುಕ್ ತನ್ನ ವ್ಯಾಪಾರ ಹಿತಾಸಕ್ತಿಗಾಗಿ ಬಿಜೆಪಿಗೆ ಅನುಕೂಲ ಮಾಡಿಕೊಟ್ಟಿದೆ ಎಂಬ ಗಂಭೀರ ಆರೋಪವನ್ನು ರಾಹುಲ್ ಮಾಡಿದ್ದಾರೆ.

ಸುಳ್ಳು ಸುದ್ದಿ ಹಾಗೂ ದ್ವೇಷ ಹರಡಲು ಆರೆಸ್ಸೆಸ್ ಹಾಗೂ ಬಿಜೆಪಿ ಫೇಸ್‌ಬುಕ್ ಹಾಗೂ ವಾಟ್ಸ್ ಆ್ಯಪ್ ಬಳಸಿಕೊಂಡಿವೆ. ಈ ಮೂಲಕ ಮತದಾರರ ಮೇಲೆ ಪ್ರಭಾವ ಬೀರಿವೆ ಎಂದು ಅವರು ದೂರಿದ್ದಾರೆ. ಈ ಸಾಮಾಜಿಕ ಜಾಲತಾಣಗಳು ತಮ್ಮ ವಿಶ್ವಾಸಾರ್ಹತೆ ಉಳಿಸಿಕೊಳ್ಳಲು ಈ ಬಗ್ಗೆ ತನಿಖೆ ನಡೆಸಿ ಆಡಳಿತ ಪಕ್ಷದ ಜತೆ ಶಾಮೀಲಾಗಿರುವ ಎಲ್ಲ ಭಾರತೀಯ ಫೇಸ್‌ಬುಕ್ ಸಿಬ್ಬಂದಿಯನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಭಾರತ ಹಾಗೂ ಅಮೆರಿಕದಲ್ಲಿರುವ ಫೇಸ್‌ಬುಕ್‌ನ ಉನ್ನತ ಅಧಿಕಾರಿಗಳಿಗೆ ಪಕ್ಷಪಾತ ವಿರುದ್ಧ ಪುರಾವೆ ನೀಡಿದ್ದೇವೆ. ಆದರೆ ಈ ಬಗ್ಗೆ ಕ್ರಮ ಕೈಗೊಂಡಿಲ್ಲ ಎಂದು ಕಾಂಗ್ರೆಸ್ ಪಕ್ಷದ ಡಾಟಾ ಅನಾಲಿಸ್ಟಿಕ್ಸ್ ವಿಭಾಗದ ಮುಖ್ಯಸ್ಥ ಪ್ರವೀಣ್ ಚಕ್ರವರ್ತಿ ಹಾಗೂ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ರೋಹನ್ ಗುಹಾ ಆಪಾದಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News