ಶೃಂಗೇರಿ ಧ್ವಜ ಪ್ರಕರಣದ ಹಿಂದೆ ಸಂಘಪರಿವಾರದ ಕೈವಾಡ ಶಂಕೆ: ಪಿಎಫ್ಐ ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಚಾಂದ್‍ಪಾಶ

Update: 2020-08-17 12:39 GMT

ಚಿಕ್ಕಮಗಳೂರು, ಆ.17: ಶೃಂಗೇರಿ ಶಂಕರಾಚಾರ್ಯರ ಪ್ರತಿಮೆಯ ಮೇಲೆ ಧ್ವಜ ಹಾರಿಸಿದ ಪ್ರಕರಣದ ಹಿಂದೆ ಸಂಘಪರಿವಾರದ ಕಾಣದ ಕೈಗಳಿರುವ ಶಂಕೆ ವ್ಯಕ್ತವಾಗುತ್ತಿದ್ದು, ಪೊಲೀಸರು ಪ್ರಕರಣದ ತನಿಖೆಯನ್ನು ಸಮ್ರಗವಾಗಿ ನಡೆಸಿ ಆರೋಪಿಗಳನ್ನು ಬಂಧಿಸಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಚಾಂದ್‍ಪಾಷಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯ ಶೃಂಗೇರಿಯಲ್ಲಿ ಶಂಕರಾಚಾರ್ಯರ ಪ್ರತಿಮೆಯ ಮೇಲೆ ಧ್ವಜ ಹಾರಿಸಿದ ಪ್ರಕರಣದಲ್ಲಿ ಪೊಲೀಸರು ಈಗಾಗಲೆ ಮಿಲಿಂದ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯು ಪೊಲೀಸರ ಬಳಿ ತನ್ನ ಒಪ್ಪನ್ನು ಒಪ್ಪಿಕೊಂಡಿದ್ದಾನೆ. ಪ್ರಕರಣ ಬೆಳಕಿಗೆ ಬಂದ ಕೂಡಲೆ ಮಾಜಿ ಸಚಿವ ಜೀವರಾಜ್ ಹಾಗೂ ಸಂಘಪರಿವಾರದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಎಸ್ ಡಿಪಿಐ ಮತ್ತು ಪಿಎಫ್ಐ ಹಾಗೂ ಮುಸ್ಲಿಂ ಸಮುದಾಯದವರ ಮೇಲೆ ನಿರಾಧಾರವಾಗಿ ಆರೋಪ ಮಾಡಿ ಜಿಲ್ಲೆಯಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿರುವುದು ಖಂಡನೀಯ ಎಂದವರು ತಿಳಿಸಿದ್ದಾರೆ.

ಪೊಲೀಸರು ಬಿಜೆಪಿ ನಾಯಕರ ಹಿಡಿತಕ್ಕೆ ಬಲಿಯಾಗದೆ ಬಂಧಿತ ಆರೋಪಿಯನ್ನು ಸೂಕ್ತ ತನಿಖೆ ನಡೆಸಿ ಇದರ ಹಿಂದಿರುವ ನೈಜ ಆರೋಪಿಗಳನ್ನು ಬಂಧಿಸಬೇಕು. ಈ ಪ್ರಕರಣವನ್ನು ಬೇಧಿಸಿ ನೈಜ ಆರೋಪಿಯನ್ನು ಬಂಧಿಸಿ ಜಿಲ್ಲೆಯಲ್ಲಿ ಆಗಬಹುದಾಗಿದ್ದ ಅನಾಹುತಗಳನ್ನು ತಡೆದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಶೃಂಗೇರಿ ಪೊಲೀಸರ ಕಾರ್ಯ ಶ್ಲಾಘನೀಯ ಎಂದವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News