ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆ ಚುರುಕು

Update: 2020-08-17 13:38 GMT

ಮಡಿಕೇರಿ ಆ.17: ಕೊಡಗಿನಲ್ಲಿ ಆಶ್ಲೇಷ ಮಳೆ ಮುಗಿದು ಇದೀಗ ಮಘ ಮಳೆ ಆರಂಭಗೊಂಡಿದ್ದು, ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಕಳೆದ ವಾರ ಸುರಿದ ಧಾರಾಕಾರ ಮಳೆಯಿಂದ ಉಂಟಾದ ಪ್ರವಾಹ ಮತ್ತು ಬೆಟ್ಟ ಕುಸಿತದಂತಹ ದುರಂತಗಳಿಂದ ಜನ ಚೇತರಿಸಿಕೊಳ್ಳುವ ಹಂತದಲ್ಲೇ ಮತ್ತೆ ಮಳೆ ಆತಂಕವನ್ನು ಮೂಡಿಸಿದೆ.

ಗಾಳಿ ಸಹಿತ ಮಳೆಯಾಗುತ್ತಿದ್ದು, ಮಡಿಕೇರಿಯಲ್ಲಿ ಮೈಕೊರೆಯುವ ಚಳಿಯ ವಾತಾವರಣವಿದೆ. ಮಡಿಕೇರಿ, ಭಾಗಮಂಡಲ, ತಲಕಾವೇರಿ, ನಾಪೋಕ್ಲು ಭಾಗದಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದೆ.

ಕೊಡಗು ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗಿನ ಮಳೆ 1770.54 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1889.19 ಮಿ.ಮೀ ಮಳೆಯಾಗಿತ್ತು.   

ಮಡಿಕೇರಿ ತಾಲೂಕಿನಲ್ಲಿ ಇಲ್ಲಿಯವರೆಗಿನ ಮಳೆ 2500.13 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2512.74 ಮಿ.ಮೀ. ಮಳೆಯಾಗಿತ್ತು.  ವಿರಾಜಪೇಟೆ ತಾಲೂಕಿನಲ್ಲಿ 1624.29 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1899.07 ಮಿ.ಮೀ., ಸೋಮವಾರಪೇಟೆ ತಾಲೂಕಿನಲ್ಲಿ 1187.19 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1255.77 ಮಿ.ಮೀ. ಮಳೆಯಾಗಿತ್ತು.   

ಹಾರಂಗಿ ನೀರಿನ ಮಟ್ಟ
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2858.16 ಅಡಿಗಳು, ಕಳೆದ ವರ್ಷ ಇದೇ ದಿನ 2857.93 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 1.50 ಮಿ.ಮೀ., ಕಳೆದ ವರ್ಷ ಇದೇ ದಿನ 6.40 ಮಿ.ಮೀ. ಇಂದಿನ ನೀರಿನ ಒಳಹರಿವು 1364 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 4783 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 1100, ನಾಲೆಗೆ 200. ಕಳೆದ ವರ್ಷ ಇದೇ ದಿನ ನದಿಗೆ 1125, ನಾಲೆಗೆ 1600 ಕ್ಯುಸೆಕ್.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News