ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ-ಅರ್ಜಿ ಆಹ್ವಾನ

Update: 2020-08-17 16:31 GMT

ಮಂಗಳೂರು, ಆ.17: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 2020-21 ನೇ ಶೈಕ್ಷಣಿಕ ಸಾಲಿಗಾಗಿ ಒಂದನೇ ತರಗತಿಯಿಂದ ಅಂತಿಮ ಪದವಿ/ ಡಿಪ್ಲೋಮಾ, ವೃತ್ತಿಪರ ಪದವಿವರೆಗೆ ವ್ಯಾಸಂಗ ಮಾಡುತ್ತಿರುವ ರಾಜ್ಯ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಿದೆ.

ಅರ್ಜಿಗಳನ್ನು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರು ಇವರಿಂದ ಪಡೆಯಬಹುದು. ಅರ್ಜಿ ಸ್ವೀಕರಿಸಲು ಅಕ್ಟೋಬರ್ 31 ಕೊನೆಯ ದಿನ ಹಾಗೂ ವೃತ್ತಿಪರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ ಅರ್ಜಿಗಳನ್ನು ಸ್ವೀಕರಿಸಲು ನವೆಂಬರ್ 30 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 0824 2450933ನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News