ಹಿರಿಯೂರು ಶಾಸಕಿ ಪೂರ್ಣಿಮಾಗೆ ಕೊರೋನ ಸೋಂಕು ದೃಢ

Update: 2020-08-18 13:38 GMT

ಚಿತ್ರದುರ್ಗ, ಆ.18: ಹಿರಿಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಕೆ.ಪೂರ್ಣಿಮಾ ಅವರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ನಿವಾಸದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತಂತೆ ಫೇಸ್ ಬುಕ್‍ನಲ್ಲಿ ಮಾಹಿತಿ ಹಂಚಿಕೊಂಡಿರುವ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೋನ ಪಾಸಿಟಿವ್ ಬಂದಿದೆ. ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ ಪ್ರಾರ್ಥಿಸುತ್ತೇನೆ. ಜತೆಗೆ ನನ್ನ ಆಪ್ತವಲಯದ ಎಲ್ಲರೂ ಪರೀಕ್ಷೆಗೆ ಒಳಗಾಗಿದ್ದು ಹಾಗೂ ನನ್ನ ಸಂಪರ್ಕದಲ್ಲಿರುವ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಕೋರುತ್ತೇನೆ ಎಂದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News