ನೂತನ ಶಿಕ್ಷಣ ನೀತಿಗೆ ಶಿಕ್ಷಕ-ಪೋಷಕರ ವಿರೋಧ: ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರತಿ ಸುಟ್ಟು ಪ್ರತಿಭಟನೆ

Update: 2020-08-18 14:19 GMT

ಬೆಂಗಳೂರು, ಆ.18: ಶಿಕ್ಷಣವನ್ನು ಕೋಮುವಾದೀಕರಣ, ಖಾಸಗೀಕರಣ, ವ್ಯಾಪರೀಕರಣಕ್ಕೆ ಒತ್ತೆ ಇಡುವುದಕ್ಕೆ ಅನುಕೂಲಕರವಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿ-2020ನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯಿಂದ ಇಂದು ದೇಶಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ದೇಶಾದ್ಯಂತ ನೂರಾರು ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ರಾಷ್ಟ್ರೀಯ ಶಿಕ್ಷಣ ನೀತಿ 2020ರ ವಿರುದ್ಧ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಬೆಂಗಳೂರಿನಲ್ಲಿ ಶಿಕ್ಷಕರು ಹಾಗೂ ಪೋಷಕರು ತಮ್ಮ ಮನೆಯಲ್ಲೇ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರತಿಯನ್ನು ಸುಟ್ಟು ಪ್ರತಿಭಟಿಸಿ, ಕೂಡಲೇ ಕೇಂದ್ರ ಸರಕಾರ ಶಿಕ್ಷಣ ನೀತಿಯನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿದರೆಂದು ಶಿಕ್ಷಣ ಉಳಿಸಿ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News