×
Ad

ಕಾಂಗ್ರೆಸ್‌ನ ‘ಆರೋಗ್ಯ ಹಸ್ತ’ ಕಾರ್ಯಕ್ರಮಕ್ಕೆ ಚಾಲನೆ

Update: 2020-08-18 20:44 IST

ಮಂಗಳೂರು, ಆ.18: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸೂಚನೆಯಂತೆ ರೂಪಿಸಲಾದ ಆರೋಗ್ಯ ಹಸ್ತ ಕಾರ್ಯಕ್ರಮಕ್ಕೆ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಮಂಗಳವಾರ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲನೆ ನೀಡಿದರು.

ಈ ಸಂದರ್ಭ ಕೊರೋನ ವಾರಿಯರ್ಸ್‌ಗಳಿಗೆ ಆರೋಗ್ಯ ಸುರಕ್ಷಾ ಹಾಗೂ ಪರೀಕ್ಷಾ ಕಿಟ್‌ಗಳನ್ನು ವಿತರಿಸಲಾಯಿತು. ಅಲ್ಲದೆ ಮಂಗಳೂರು ನಗರ ಬ್ಲಾಕ್ ಹಾಗೂ ಮಂಗಳೂರು ನಗರ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಪ್ರತೀ ವಾರ್ಡ್‌ನಲ್ಲಿರುವ ಕಾಂಗ್ರೆಸ್ ಪಕ್ಷದ ಕೊರೋನ ವಾರಿಯರ್ಸ್‌ಗಳಿಗೆ ತರಬೇತಿ ಕಾರ್ಯಗಾರವು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಜಿಪಂ ಸದಸ್ಯ ಶಾಹುಲ್ ಹಮೀದ್ ಭಾಗವಹಿಸಿದ್ದರು.

ನಗರ ಬ್ಲಾಕ್ ಅಧ್ಯಕ್ಷ ವಿಶ್ವಾಸ್‌ಕುಮಾರ್ ದಾಸ್, ಕೆಪಿಸಿಸಿ ಉಸ್ತುವಾರಿ ಮುರಳಿ ಶೆಟ್ಟಿ ಇಂದ್ರಾಳಿ, ಪಕ್ಷದ ಮುಖಂಡರಾದ ಟಿ.ಕೆ.ಸುಧೀರ್, ಸುರೇಶ್ ಶೆಟ್ಟಿ, ಟಿ.ಹೊನ್ನಯ್ಯ, ಶಾಂತಳಾ ಗಟ್ಟಿ, ನವೀನ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.

ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಸಲೀಂ ಸ್ವಾಗತಿಸಿದರು. ಸದಾಶಿವ್ ಅಮೀನ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News