×
Ad

ಪರ್ಕಳದ ಉದ್ಯಮಿ ಮುಹಮ್ಮದ್ ಶರೀಫ್ ನಿಧನ

Update: 2020-08-18 20:47 IST

ಉಡುಪಿ, ಆ.18: ಪರ್ಕಳ ಕೆ.ಎಚ್.ಹಾರ್ಡ್‌ವೇರ್ ಮಾಲಕ ಹಾಗೂ ಸುನ್ನೀ ಸಂಘಟನೆಗಳ ಉಮರಾ ನಾಯಕ ಮುಹಮ್ಮದ್ ಶರೀಫ್(44) ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು.

ಇವರು ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್ ಇದರ ಬೆಳ್ಳಿಹಬ್ಬ ಉಡುಪಿ ಜಿಲ್ಲಾ ಸ್ವಾಗತ ಸಮಿತಿಯ ಕೋಶಾಧಿಕಾರಿಯಾಗಿ, ಆತ್ರಾಡಿ ಮುಹಿಯ್ಯುದ್ದೀನ್ ಜುಮಾ ಮಸೀದಿಯ ಕಾರ್ಯಕಾರಿ ಸಮಿತಿ ಸದಸ್ಯ, ಪರ್ಕಳ ಮಾರ್ನಿಂಗ್ ಕ್ರಿಕೆಟ್ ಕ್ಲಬ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಇವರ ನಿಧನಕ್ಕೆ ಇಂಡಿಯನ್ ಗ್ರಾಂಡ್ ಮುಫ್ತಿ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ, ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್ ಕೇಂದ್ರ ಸಮಿತಿ ಅಧ್ಯಕ್ಷ ಅಸ್ಸಯ್ಯಿದ್ ಕೆ.ಎಸ್.ಆಟಕೋಯ ತಂಙಳ್ ಕುಂಬೋಳ್, ಉಡುಪಿ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಬೇಕಲ ಇಬ್ರಾಹಿಂ ಮುಸ್ಲಿಯಾರ್, ಶಿವಮೊಗ್ಗ ಜಿಲ್ಲಾ ಮುಸ್ಲಿಂ ಜಮಾಅತ್ ಉಪಾಧ್ಯಕ್ಷ ಅಸ್ಸಯ್ಯಿದ್ ಹಾರೂನ್ ತಂಙಳ್ ಭದ್ರಾವತಿ, ಮೂಳೂರು ಮಾರ್ಕಝ್ ಜನರಲ್ ಮ್ಯಾನೇಜರ್ ಯು.ಕೆ.ಮುಸ್ತಫ ಸಅದಿ, ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಜಿ ಬಿ.ಎಂ.ಮುಮ್ತಾಝ್ ಅಲಿ ಕೃಷ್ಣಾಪುರ, ರಾಜ್ಯ ಸದಸ್ಯ ಕೆ.ಎ. ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ, ಜಿಲ್ಲಾ ಸುನ್ನೀ ಸಂಯುಕ್ತ ಅಧ್ಯಕ್ಷ ಹಾಜಿ ಪಿ.ಅಬೂಬಕ್ಕರ್ ನೇಜಾರು, ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಅಶ್ರಫ್ ಅಂಜದಿ, ಬೈಂದೂರು ತಾಲೂಕು ಮುಸ್ಲಿಂ ಜಮಾಅತ್ ಅಧ್ಯಕ್ಷ ಮನ್ಸೂರ್ ಮರವಂತೆ, ಆತ್ರಾಡಿ ಮುಹಿಯ್ಯುದ್ದೀನ್ ಜುಮಾ ಮಸೀದಿಯ ಅಧ್ಯಕ್ಷ ಇಸ್ಮಾಯಿಲ್ ಆತ್ರಾಡಿ, ಕಾಂಗ್ರೆಸ್ ಮುಖಂಡರಾದ ಸುಜಿತ್ ಶೆಟ್ಟಿಗಾರ್, ಗಣೇಶ್‌ರಾಜ್ ಸರಬೆಟ್ಟು ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News