×
Ad

ಯುವ ಕಾಂಗ್ರೆಸ್‌ನಿಂದ ನಿರ್ಗತಿಕರಿಗೆ ಕಂಬಳಿ ವಿತರಣೆ

Update: 2020-08-18 21:04 IST

ಉಡುಪಿ, ಆ.18: ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್ ನೇತೃತ್ವದಲ್ಲಿ ಉಡುಪಿ ಸಾರ್ವಜನಿಕ ಸ್ಥಳಗಳಲ್ಲಿ ಮಲಗುತ್ತಿದ್ದ ನಿರ್ಗತಿಕರಿಗೆ ಚಳಿಯಿಂದ ರಕ್ಷಣೆ ಪಡೆಯಲು ಕಂಬಳಿ ವಿತರಿಸುವ ಮೂಲಕ 74ನೇ ಸ್ವಾತಂತ್ರ್ಯ ದಿನವನು್ನ ಬಹಳ ವಿಶಿಷ್ಠವಾಗಿ ಆಚರಿಸಲಾಯಿತು.

ಉಡುಪಿಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ಯಿಂದಾಗಿ ಸೂರು ಇಲ್ಲದೆ ನಗರದ ಬೀದಿ ಬದಿ ಮಲಗುವ ನಿರಾಶ್ರಿತರಿಗೆ ಚಳಿಯಿಂದ ರಕ್ಷಣೆ ಪಡೆಯಲು ಹೊದಿಕೆಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್‌ನ ಝಮೀರ್, ಹಮದ್ ಹಾಗೂ ಪ್ರದೀಪ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News